ಬೆಳಗಾವಿ :ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ (Heavy Rain) ಆಗುತ್ತಿದೆ. ಅದರ ಪರಿಣಾಮ ಬೆಳಗಾವಿ(Belagavi) ಜಿಲ್ಲೆಯ ನದಿ ಪಾತ್ರಗಳಲ್ಲಿ ಕಾಣುತ್ತಿದೆ. ಭಾರಿ ಪ್ರಮಾಣದಲ್ಲಿ ನದಿಗಳಲ್ಲಿ ನೀರು ಹರಿಯುತ್ತಿದೆ. ಬೆಳಗಾವಿ ಜಿಲ್ಲೆ ಲೋಂಡಾದಲ್ಲಿ ಬರೋಬ್ಬರಿ ೭ ಸೆಂ.ಮೀ. ಮಳೆ ಸುರಿದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಪ್ರತಿವರ್ಷದಂತೆ ಈ ವರ್ಷವೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆ (heavy rain)ಗೆ ಮಹಾರಾಷ್ಟ್ರದ ನದಿ ಕೊಳ್ಳಗಳು ತುಂಬಿ ಹರಿಯುತ್ತಿದೆ. ಅಲ್ಲಿಂದ ಬೆಳಗಾವಿ ಜಿಲ್ಲೆಗೆ ಪ್ರವೇಶಿಸುವ ನದಿಕೊಳ್ಳಗಳು ಉಕ್ಕೇರಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯ ೫೦ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆಯಾಗಿರುವುದು ಈ ಬಾರಿಯ ಮಳೆಗಾಲದ ವಿಶೇಷ.

ಇದನ್ನೂ ಓದಿ : ವಾಹನ ಚಾಲಕ – ಮಾಲಕರಿಗೆ ಪೊಲೀಸ್ ಇಲಾಖೆ ಸೂಚನೆ

ಕೃಷ್ಣಾ ನದಿಯ ಒಳಹರಿವು ಹೆಚ್ಚಿದ್ದು, ೧.೫೦ ಲಕ್ಷ ಕ್ಯುಸೆಕ್ಸ್ ಒಳಹರಿವು ದಾಖಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ ಹಾಗೂ ಅದರ ಉಪನದಿಗಳು ತುಂಬಿ ಹರಿಯುತ್ತಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹೊರವಲಯದ ದತ್ತ ಮಂದಿರ ಕೃಷ್ಣಾ ನದಿ (Krishna river) ಪ್ರವಾಹದಲ್ಲಿ ಮುಳುಗಿದೆ.