ಚಿಕ್ಕಮಗಳೂರು: ಕಳಸ–ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ(hebbala bridge) ಪದೇ ಪದೇ ಮುಳುಗಡೆಯಾಗುತ್ತಿದೆ. ಕಳೆದ ೧೫ ದಿನಗಳಲ್ಲಿ ೧೦ಕ್ಕೂ ಹೆಚ್ಚು ಬಾರಿ ಈ ಸೇತುವೆ ಮುಳುಗಡೆಯಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಕಾಫಿನಾಡಿನ ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಜೊತೆಗೆ ಗಾಳಿಯೂ ಬಲವಾಗಿ ಬೀಸುತ್ತಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳ ಸೇತುವೆ(hebbala bridge) ಪದೇ ಪದೆ ಮುಳುಗಡೆಯಾಗುತ್ತಿದೆ.

ಇದನ್ನೂ ಓದಿ : ನೀರು ನುಗ್ಗಿದ ಮನೆಯಲ್ಲಿ ಕಾಲು ಜಾರಿ ಬಿದ್ದು ವೃದ್ಧೆ ಸಾವು

ಸೇತುವೆ ಮುಳುಗಡೆಯಿಂದ ಹತ್ತಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಿದೆ. ನಿರಂತರ ಮಳೆಯಿಂದಾಗಿ ಮಲೆನಾಡಿಗರು ಹೈರಾಣಾಗಿದ್ದಾರೆ.