ಯಲ್ಲಾಪುರ : ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಉಪನಿರ್ದೇಶಕ(DDPU)ರಾಗಿ ಅಧಿಕಾರ ವಹಿಸಿಕೊಂಡಿರುವ ರಾಜಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಈ ಸಂದರ್ಭದಲ್ಲಿ ನೂತನ ಉಪನಿರ್ದೇಶಕ(DDPU) ರಾಜಪ್ಪ ಮಾತನಾಡಿ, ಬರುವ ವರ್ಷದಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವುದು, ದ್ವಿತೀಯ ಪಿಯು ಫಲಿತಾಂಶದಲ್ಲಿ ಹೆಚ್ಚಳ ಮಾಡುವುದು ತಮ್ಮ ಪ್ರಮುಖ ಗುರಿಯಾಗಿದೆ. ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವಂತಾಗಲು ಪ್ರಾಂಶುಪಾಲರು ಶ್ರಮ ವಹಿಸಬೇಕು. ಈ ವರ್ಷ ಉತ್ತಮ ಫಲಿತಾಂಶ ಬಂದಿದೆ. ಇನ್ನೂ ಸ್ವಲ್ಪ ಪ್ರಯತ್ನ ಪಟ್ಟರೆ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ ಪ್ರಥಮ ಅಥವಾ ದ್ವಿತೀಯ ಸ್ಥಾನ ಪಡೆಯಬಹುದು. ಇದಕ್ಕಾಗಿ ಎಲ್ಲ ಪ್ರಾಂಶುಪಾಲರೂ ಸಹಕರಿಸಬೇಕು ಎಂದರು.
ಇದನ್ನೂ ಓದಿ : ವಿದೇಶಿ ವಿದ್ಯಾಭ್ಯಾಸಕ್ಕೆ ಸಿಗಲಿದೆ ಸಾಲ
ಆಡಳಿತಾತ್ಮಕ ಸಮಸ್ಯೆಗಳ ಕುರಿತು ಮಾತನಾಡಿದ ಅವರು, ಇದ್ದ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಮಸ್ಯೆ ಪರಿಹಾರ ಆಗುತ್ತದೆ. ನನ್ನಿಂದ ಏನೆಲ್ಲ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ. ಕಾಲೇಜು ಮಟ್ಟದಲ್ಲಿ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಇಟ್ಟುಕೊಳ್ಳುವುದರ ಮೂಲಕ ಆಡಳಿತವನ್ನು ಸುಸೂತ್ರವಾಗಿ ನೆರವೇರುವಂತೆ ಸಹಕರಿಸಬೇಕು ಎಂದರು.
ಇದನ್ನೂ ಓದಿ : ಜುಲೈ ೨೬ರಂದು ವಿವಿಧೆಡೆಯ ಅಡಿಕೆ ಧಾರಣೆ
ಈ ಸಂದರ್ಭದಲ್ಲಿ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸತೀಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಎ.ಬಿ. ರಾಮರಥ ಸೇರಿದಂತೆ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಪ್ರಾಂಶುಪಾಲರು ಉಪಸ್ಥಿತರಿದ್ದರು.