ಭಟ್ಕಳ: ಇಲ್ಲಿನ ಬೆಂಗ್ರೆ ಗ್ರಾಪಂ ಚಿಟ್ಟೆಹಕ್ಕಲ್ ಸೋಮಯ್ಯನಮನೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುರುಡೇಶ್ವರ ಕನ್ನಡಶಾಲೆ ವ್ಯಾಪ್ತಿಯ ನಿವಾಸಿ ಭಾರತಿ ನರಸಿಂಹ ಭಟ್ (೫೫) ರವಿವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ(teacher died).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಹೃದಯಾಘಾತಕ್ಕೆ ಒಳಗಾದ ಅವರನ್ನು ರವಿವಾರ ರಾತ್ರಿಯೇ ಚಿಕಿತ್ಸೆಗಾಗಿ ಮುರುಡೇಶ್ವರ ಖಾಸಗಿ ಆಸ್ಪತ್ರೆಗೆ ಕರೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆ ತರುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ(teacher died) ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಮಾರಿಯಮ್ಮ ಸಾಗುವ ರಸ್ತೆ ದುರಸ್ತಿ ಮಾಡಿ
ಕಂದಾಯ ನಿರೀಕ್ಷಕರಾಗಿದ್ದ ಇವರ ಪತಿ ನರಸಿಂಹ ಭಟ್ ೪-೫ ವರ್ಷಗಳ ಹಿಂದೆಯೇ ಇಹಲೋಕ ತ್ಯಜಿಸಿದ್ದಾರೆ. ಭಾರತಿ ಭಟ್ ಅವರಿಗೆ ಒಂದು ಗಂಡು, ಒಂದು ಹೆಣ್ಣು ಸೇರಿದಂತೆ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು-ಬಳಗವಿದೆ.
ಇದನ್ನು ಓದಿ : ನಾಳೆ ಗದ್ದುಗೆ ಏರಲಿದ್ದಾಳೆ ಮಾರಮ್ಮ
ಇವರು ಕಳೆದ ೧೫ ವರ್ಷಗಳಿಂದ ಚಿಟ್ಟಿಹಕ್ಕಲ್ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ನಿಧನಕ್ಕೆ ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.