ಭಟ್ಕಳ: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ(New BEO) ದಕ್ಷಿಣ ಕನ್ನಡ ಜಿಲ್ಲೆಯ ಉಪನಿರ್ದೇಶಕ ವೆಂಕಟೇಶ ನಾಯಕ ಗುರುವಾರ ಅಧಿಕಾರ ಸ್ವೀಕರಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್‌ ಮಾಡಲು ಇಲ್ಲಿ ಒತ್ತಿ.

ಅಂಕೋಲಾ ಮೂಲದವರಾದ ವೆಂಕಟೇಶ ನಾಯಕ, ಈ ಹಿಂದೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ, ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ನೂತನ ಶಿಕ್ಷಣಾಧಿಕಾರಿ (New BEO) ವೆಂಕಟೇಶ ಅವರನ್ನು ಸಿಆರ್‌ಪಿ, ಬಿಆರ್‌ಪಿ, ಶಿಕ್ಷಕರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಭಟ್ಕಳ ವತಿಯಿಂದ ಹೂಗುಚ್ಛ ನೀಡಿ ಸನ್ಮಾನಿ ಸ್ವರಣಿಕೆ ಕೊಟ್ಟು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಭಟ್ಕಳ ತಾಲೂಕಾಧ್ಯಕ್ಷ ಮೋಹನ ನಾಯ್ಕ, ಪ್ರಕಾಶ ಶಿರಾಲಿ, ಗಣೇಶ ಭಟ್, ಮಂಜುನಾಥ ಉಪಸ್ಥಿತರಿದ್ದರು.

ಇದನ್ನೂ ಓದಿ: ಭಟ್ಕಳ ತಾಪಂನಲ್ಲಿ ವಿ.ಡಿ.ಮೊಗೇರ ಬೀಳ್ಕೊಡುಗೆ