ಭಟ್ಕಳ: ರಾಷ್ಟ್ರೀಯ ಹೆದ್ದಾರಿ ೬೬ರ ರಂಗಿನಕಟ್ಟೆ ಬಳಿ ಸಾರಿಗೆ ಬಸ್‌ ಡಿಕ್ಕಿಯಾಗಿ ಗಾಯಗೊಂಡ ಅಪರಿಚಿತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ(unknown died).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್‌ ಮಾಡಲು ಇಲ್ಲಿ ಒತ್ತಿ.

ಧರ್ಮಸ್ಥಳ ದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವಾಕರಸಾ ಸಂಸ್ಥೆಯ ಬಸ್‌ ೪೦ ವರ್ಷದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಅತೀವೇಗ ಹಾಗೂ ಅಜಾಗರೂಕತೆಯಿಂದ ಚಾಲಕ ಬಸ್ ಚಲಾಯಿಸಿಕೊಂಡು ಬಂದಿದ್ದರಿಂದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಅಪರಿಚಿತ ಗಂಭೀರ ಗಾಯಗೊಂಡಿದ್ದರಿಂದ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಪರಿಚಿತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ (unknown died).

ಇದನ್ನೂ ಓದಿ : ನಿವೃತ್ತ ಬಿಇಒ ವಿ.ಡಿ.ಮೋಗೇರ ಅವರಿಗೆ ಬೀಳ್ಕೊಡುಗೆ

ಮೃತ ವ್ಯಕ್ತಿಯು ಸಪೂರ ಶರೀರ, ಕಪ್ಪು ಮೈಬಣ್ಣ ಹೊಂದಿದ್ದಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಭಟ್ಕಳ ಶಹರ ಠಾಣೆ ದೂ.ಸಂ: ೦೮೩೮೫-೨೨೬೩೩೩, ಮೊ.ನಂ: ೯೪೮೦೮೦೫೨೬೯ ಅಥವಾ ಪೊಲೀಸ್ ಕಂಟ್ರೋಲ್ ರೂಮ್ ದೂ.ಸಂ: ೦೮೩೮೫-೨೨೬೫೫೦ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಭಟ್ಕಳ ಶಹರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಆಗಸ್ಟ್‌ ೨ರಂದು ವಿವಿಧೆಡೆ ಅಡಿಕೆ ಧಾರಣೆ