ಭಟ್ಕಳ : ತಾಲೂಕಿನ ಹೊನ್ನಿಗದ್ದೆ ಬೂತ್ ನಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು “ಮತ್ತೊಮ್ಮೆ ಮೋದಿ 2024” : ಗೋಡೆ ಬರಹಕ್ಕೆ ಭಾನುವಾರ ಚಾಲನೆ ನೀಡಿದರು.


ಭಟ್ಕಳ ಮಂಡಲದ ಅಧ್ಯಕ್ಷ ಹಾಗೂ ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಡಿಗ, ಮಾಜಿ ಶಾಸಕ ಸುನೀಲ್ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಹಾಗೂ ಗೋಡೆ ಬರಹ ಅಭಿಯಾನದ ಸಂಚಾಲಕ ಶ್ರೀಕಾಂತ ನಾಯ್ಕ, ಎಸ್ ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಗೊಂಡ, ಮಂಡಲ ಪ್ರಧಾನ ಕಾರ್ಯದರ್ಶಿ ಭಾಸ್ಕರ ದೈಮನೆ, ನಗರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರುಣ ನಾಯ್ಕ, ಹೆಬಳೆ ಪಂಚಾಯತ್ ಸದಸ್ಯ ವಿಜೇತ ಶೆಟ್ಟಿ ಹಾಗೂ ಹೊನ್ನಿಗದ್ದೆ ಬೂತ್ ನ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.