ಭಟ್ಕಳ: ಇಲ್ಲಿನ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯು ಸಾಮಾಜಿಕ ಮಾಧ್ಯಮ ಅಡ್ಮಿನ್, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮಾಧ್ಯಮ ಬಳಕೆ ಮತ್ತು ಸೈಬರ್ ಸುರಕ್ಷತೆ (cyber security) ಕುರಿತು ಜಾಗೃತಿ ಮೂಡಿಸಲು ಶನಿವಾರದಂದು ನವಾಯತ್ ಕಾಲೋನಿಯ ರಾಬಿತಾ ಸೊಸೈಟಿ ಸಭಾಂಗಣದಲ್ಲಿ ಅರ್ಧ ದಿನದ ಕಾರ್ಯಗಾರ ಆಯೋಜಿಸಿತ್ತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ಖ್ಯಾತ ನ್ಯಾಯವಾದಿ ಮತ್ತು ಸಾಮಾಜಿಕ ಹೋರಾಟಗಾರ ಬಿ.ಟಿ.ವೆಂಕಟೇಶ್ ಮತ್ತು ಕರ್ನಾಟಕ ಪೊಲೀಸ್ ಅಕಾಡೆಮಿಯ ಸೈಬರ್ ಸುರಕ್ಷತೆ (cyber security) ತರಬೇತುದಾರರಾಗಿರುವ ಮಂಗಳೂರು ಸಹ್ಯಾದ್ರಿ ಕಾಲೇಜೀನ ಪ್ರಾಧ್ಯಾಪಕ ಡಾ.ಅನಂತ ಪ್ರಭು ಭಾಗವಹಿಸಿದ್ದರು.

ಇದನ್ನೂ ಓದಿ : ಆಗಸ್ಟ್‌ ೧೦ರಂದು ಸೊರಬದಲ್ಲಿ ಅಡಿಕೆ ಧಾರಣೆ

ಇಂದು ಯಾರೂ ಕೂಡ ಸುರಕ್ಷಿತವಾಗಿಲ್ಲ. ನಮ್ಮ ಎಲ್ಲ ದತ್ತಾಂಶಗಳು ಸೋರಿಕೆಯಾಗುತ್ತಿವೆ. ನಮ್ಮ ಸ್ಮಾರ್ಟ್ ಫೋನ್ ನಮ್ಮದೇ ಚಲನವಲನಗಳನ್ನು ಗಮನಿಸುತ್ತಿದೆ. ನಮ್ಮ ಬ್ಯಾಂಕ್ ಖಾತೆಗಳಿಗೆ ಯಾರು ಬೇಕಾದರೂ ಕನ್ನ ಹಾಕಬಹುದು. ಕ್ಷಣಾರ್ಧದಲ್ಲೇ ನಮ್ಮ ಖಾತೆಯಿಂದ ಲಕ್ಷಾಂತರ ರೂಪಾಯಿಗಳನ್ನು ದೋಚಬಹುದು. ಇದು ಪ್ರತಿನಿತ್ಯವೂ ನಡೆಯುತ್ತಲೇ ಇದೆ. ಇವುಗಳಿಂದ ಸುರಕ್ಷಿವಾಗಿರಲು ಹಲವು ಉಪಕ್ರಮಗಳಿವೆ. ಅದನ್ನು ಅನುಸರಿಸಿದರೆ ಅಗಬಹುದಾದ ಅನಾಹುತಗಳಿಂದ ರಕ್ಷಿಸಿಕೊಳ್ಳಬಹುದು ಎಂದು ಅನಂತ ಪ್ರಭು ಹೇಳಿದರು.

ಇದನ್ನೂ ಓದಿ : ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗಕ್ಕೆ ಜೋಡಿ ಹಳಿ

ನ್ಯಾಯವಾದಿ ಬಿ.ಟಿ ವೆಂಕಟೇಶ್ ಮಾತನಾಡಿ, ಆಧುನಿಕ ತಂತ್ರಜ್ಞಾನದಿಂದ ಲಾಭ ಮತ್ತು ನಷ್ಟಗಳು ಸಮವಾಗಿದೆ. ಅದರ ಬಳಕೆಯ ಮೇಲೆ ಲಾಭ-ನಷ್ಟದ ಲೆಕ್ಕ ಹಾಕಬಹುದು. ಸಾಮಾಜಿಕ ಮಾಧ್ಯಮಗಳಿಂದ ದೂರ ಇರಲು ಯಾರಿಂದಲೂ ಸಾಧ್ಯವಿಲ್ಲ. ಅದೀಗ ನಮ್ಮ ಬುದುಕಿನ ಅತಿ ಮುಖ್ಯ ವೇದಿಕೆಯಾಗಿ ಮಾರ್ಪಟ್ಟಿದೆ ಎಂದರು.

ಇದನ್ನೂ ಓದಿ : ಕಂದಮ್ಮಗಳನ್ನು ಬಾವಿಗೆ ತಳ್ಳಿ ತಾನೂ ಬಾವಿಗೆ ಹಾರಿದ ತಾಯಿ

ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದ ತಂಝೀಮ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ., ಇತ್ತಿಚೆಗೆ ನಮ್ಮ ಸುತ್ತಮುತ್ತಲು ಅನೇಕ ಮಂದಿ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ತಂಝೀಮ್ ಸಂಸ್ಥೆ ಇಂತಹ ಸೈಬರ್ ಸೆಕ್ಯುರಿಟಿ (cyber security) ಕಾರ್ಯಾಗಾರ ಆಯೋಜಿಸುತ್ತಿದೆ ಎಂದರು.

ಇದನ್ನೂ ಓದಿ : ಒಳಚರಂಡಿ ಕಾಮಗಾರಿ ಬಗ್ಗೆ ಪುರಪಿತೃರ ಅಸಮಾಧಾನ

ತಂಝೀಮ್ ಮೀಡಿಯಾ ವಾಚ್ ಕಮಿಟಿ ಸಂಚಾಲಕ ಅಫ್ತಾಬ್ ಹುಸೇನ್ ಕೋಲಾ ಅತಿಥಿಗಳನ್ನು ಪರಿಚಯಿಸಿದರು. ಮಿಸ್ಬಾ-ಉಲ್ -ಹಖ್ ಧನ್ಯವಾದ ಅರ್ಪಿಸಿದರು. ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಅಂಜುಮನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಯುನೂಸ್ ಖಾಝಿಯಾ, ರಾಬಿತಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅತಿಕುರ‍್ರಹ್ಮಾನ್ ಮುನಿರಿ, ಕಾರ್ಯಗಾರದ ಸಂಚಾಲಕ ಮುಬಶ್ಶಿರ್ ಹುಸೇನ್ ಹಲ್ಲಾರೆ, ತಂಝೀಮ್ ರಾಜಕೀಯ ಸಮಿತಿ ಸಂಚಾಲಕ ಸೈಯ್ಯದ್ ಇಮ್ರಾನ್ ಲಂಕಾ ಮತ್ತಿತರರು ಉಪಸ್ಥಿತರಿದ್ದರು.