ಹೊನ್ನಾವರ: ಹರ್ ಘರ್ ತಿರಂಗಾ ಅಭಿಯಾನ ಜಾಗೃತಿಗಾಗಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಹಾಗೂ ಹೊನ್ನಾವರ ಮಂಡಲದ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ (bike rally) ಜರುಗಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್‌ ಮಾಡಲು ಇಲ್ಲಿ ಒತ್ತಿ.

ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಕರ್ಕಿ ತ್ರಿವರ್ಣ ಧ್ವಜವನ್ನು ಹಿಡಿದು ಬೈಕ್ ಜಾಥಾ (bike rally)ಗೆ ಚಾಲನೆ ನೀಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಎನ್ನುವ ಉದ್ದೇಶದಿಂದ, ಆಗಸ್ಟ್‌ ೧೩ರ ಬೆಳಿಗ್ಗೆಯಿಂದಲೇ ಧ್ವಜ ಹಾರಿಸಲು ಅನುವು ಮಾಡಿಕೊಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರ, ಮಹಾಪುರುಷರ ಪುತ್ಥಳಿ ಸ್ವಚ್ಛತೆ, ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸುವ ಕೆಲಸ ಮಾಡಲು ಯೋಜನೆ ರೂಪಿಸಲಾಗಿದೆ. ದೇಶ ವಿಭಜನೆಯ ಕರಾಳ ಇತಿಹಾಸ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಭಜನಾ ವಿಭಿಷಿಕಾ ಸ್ಮೃತಿ ದಿವಸ ಆಚರಣೆ ಮಾಡಲಾಗುವುದು ಎಂದರು.

ವಿಡಿಯೋ ಸಹಿತ ಇದನ್ನೂ ಓದಿ : ಜನರ ಸಮಸ್ಯೆ ಸ್ಪಂದನೆಗೆ ಜನಸ್ಪಂದನ : ಮಂಕಾಳ ವೈದ್ಯ

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನಾಡಿದ ಯುವಮೋರ್ಚಾ ಜಿಲ್ಲಾಧ್ಯಕ್ಷ ಹಾಗೂ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಪ್ರೇಮಕುಮಾರ ನಾಯ್ಕ, ಇಂದಿನಿಂದ ಆಗಸ್ಟ್‌ ೧೫ರವರೆಗೂ ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಬೈಕ್ ಜಾಥಾ, ತಿರಂಗಾ ಜಾಥಾಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶಪ್ರೇಮ ಇರುವ ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ʼಬೆಂಗಳೂರು ಚಲೋ’ ಗೆ ಐಟಾ ಬೆಂಬಲ

ನಗರದ ಶರಾವತಿ ವೃತ್ತದಿಂದ ಆರಂಭಗೊಂಡ ಬೈಕ್ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಜಾಥಾದಲ್ಲಿ ಪಾಲ್ಗೊಂಡ ಪ್ರಮುಖರು ತ್ರಿವರ್ಣ ಧ್ವಜವನ್ನು ಹಾರಿಸುತ್ತಾ, ಭಾರತ ಮಾತೆಗೆ ಜಯಘೋಷ ಹಾಕುತ್ತಾ ಸಾಗಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಹರ್ ಘರ್ ತಿರಂಗಾ ಅಭಿಯಾನದ ಜಿಲ್ಲಾ ಸಂಚಾಲಕ ಗುರುಪ್ರಸಾದ ಹೆಗಡೆ ಹರ್ತೆಬೈಲ್, ಪ್ರಶಾಂತ ನಾಯ್ಕ, ಅಭಿಯಾನದ ಜಿಲ್ಲಾ ಸಹ ಸಂಚಾಲಕ ರವಿಚಂದ್ರ ಶೆಟ್ಟಿ, ಹೊನ್ನಾವರ ಮಂಡಲ ಅಧ್ಯಕ್ಷ ಮಂಜುನಾಥ ನಾಯ್ಕ, ಪ್ರಧಾನ ಕಾರ್ಯದರ್ಶಿ ಗಣಪತಿ ಗೌಡ ಚಿತ್ತಾರ, ಯೋಗೇಶ ಮೇಸ್ತಾ, ನಿಕಟಪೂರ್ವ ಅಧ್ಯಕ್ಷ ರಾಜೇಶ ಭಂಡಾರಿ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಮೋದ ನಾಯ್ಕ, ಯುವಮೋರ್ಚಾ ತಾಲೂಕ ಅಧ್ಯಕ್ಷ ರಘು ಖಾರ್ವಿ, ಪ್ರಮುಖರಾದ ಎಂ ಜಿ ನಾಯ್ಕ, ಜಿ ಜಿ ಶಂಕರ, ನಾರಾಯಣ ಹೆಗಡೆ‌ ,ಗೋವಿಂದ ಗೌಡ, ಕೃಷ್ಣ ಜೋಶಿ, ವಿನಾಯಕ ನಾಯ್ಕ, ಮತ್ತಿತರರು ಉಪಸ್ಥಿತರಿದ್ದರು.