ಹೊನ್ನಾವರ : ಕುಮಟಾದ ೧೧೦ ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ೧೧೦ ಕೆವಿ ಬಸ್ಬಾರ್ ನಿರ್ವಹಣೆ ಹಾಗೂ ಕುಮಟಾ, ಹೊನ್ನಾವರ ಮತ್ತು ಮುರ್ಡೇಶ್ವರ ಉಪಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿದೆ. ಹೀಗಾಗಿ ಈ ಮೂರು ತಾಲೂಕುಗಳಲ್ಲಿ ವಿದ್ಯುತ್ ವ್ಯತ್ಯಯ (power cut) ಆಗಲಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಆ.೧೪ರಂದು ಬುಧವಾರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವ್ಯಾಪ್ತಿಯ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಕವಿಪ್ರನಿನಿ ಅಧಿಕಾರಿಗಳು ತಿಳಿಸಿದ್ದಾರೆ. ಆದ ಕಾರಣ ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಹೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಅಭಿಯಂತರು ವಿನಂತಿಸಿದ್ದಾರೆ.
ಇದನ್ನೂ ಓದಿ : ಅಮೇರಿಕಾಕ್ಕೆ ಹೊರಟ ಕುಗ್ರಾಮದ ಪ್ರತಿಭೆ