ಭಟ್ಕಳ : ೭೮ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಹರ್ ಘರ್ ತಿರಂಗ ಅಭಿಯಾನ ಜಾಥಾಕ್ಕೆ  (tiranga rally) ಬುಧವಾರ ಸಹಾಯಕ ಆಯುಕ್ತೆ ಡಾ. ನಯನ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಈ ಸಂದರ್ಭ ಮಾತನಾಡಿದ ಡಾ.ನಯನ, ೭೮ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಂಗವಾಗಿ ನಾವು ತಾಲೂಕಾಡಳಿತ , ತಾಲೂಕು ಪಂಚಾಯತ, ಭಟ್ಕಳ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಹರ್  ಘರ್ ತಿರಂಗ ಅಭಿಯಾನ (Tiranga rally) ಯಶಸ್ವಿಯಾಗಲಿ ಎಂದು ಶುಭಾಶಯ ಕೋರಿದರು.

ವಿಡಿಯೋ ಸಹಿತ ಇದನ್ನೂ ಓದಿ : ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ

ತಹಶೀಲ್ದಾರ್ ನಾಗರಾಜ ನಾಯ್ಕಡ  ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ನೆನಪಿಗಾಗಿ ಈ ಜಾಥಾವನ್ನು ನಡೆಸಲಾಗಿದೆ. ಇದಕ್ಕೆ ಸಹಕಾರ ನೀಡಿದ ತಾಲೂಕಿನ ಎಲ್ಲಾ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದರು. ಪ್ರತಿ ಮನೆ ಮನೆಯಲ್ಲಿಯೂ ತ್ರಿವರ್ಣ ದ್ವಜ (har ghar Tiranga) ಹಾರಿಸುವ ಮುಖಾಂತರ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದರು.

ವಿಡಿಯೋ ಸಹಿತ ಇದನ್ನೂ ಓದಿ : ಭಟ್ಕಳದಲ್ಲಿ ಬೈಕ್ ರ‌್ಯಾಲಿ ಯಶಸ್ವಿ

ಈ ಅಭಿಯಾನ ಜಾಥಾವು ಆಡಳಿತ ಸೌಧದಿಂದ ಹೊರಟು ಶಂಶುದ್ದಿನ್ ಸರ್ಕಲ್ ಮುಖಾಂತರ ಪುನಃ ಆಡಳಿತ ಸೌಧಕ್ಕೆ ಬಂದು ಮುಕ್ತಾಯಗೊಂಡಿತು. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ :  ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

ಈ ಸುದ್ದಿಗೆ ಸಂಬಂಧಿಸಿದ ವಿಡಿಯೋ ಫೇಸ್‌ಬುಕ್‌, ಇನ್ಸ್ಟಾಗ್ರಾಂನಲ್ಲಿ  ಮತ್ತು ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದು.