ಭಟ್ಕಳ(Bhatkal): ಮಹಿಳಾ ಶಿಕ್ಷಣವು ಭವಿಷ್ಯದ ಪೀಳಿಗೆಯ ಮೇಲೆ ಆಳವಾದ ಪರಿಣಾಮ ಬೀರುತ್ತಿದೆ. ಉನ್ನತ ಶಿಕ್ಷಣ ಪಡೆಯುವುದರ ಮೂಲಕ ವಿದ್ಯಾರ್ಥಿನಿಯರು ಆರ್ಥಿಕ ಸ್ವಾತಂತ್ರ್ಯ ಗಳಿಸಿಕೊಳ್ಳುವಂತೆ ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ (DC Lakshmipriya) ಕರೆ ನೀಡಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಅವರು ಭಟ್ಕಳದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಮಹಿಳಾ ಪದವಿ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಕೊಡುತ್ತಿರುವ ೨೦೦೦ ರೂ.ಯನ್ನು ಮನೆ ಖರ್ಚಿಗೆ ಬಳಕೆ ಮಾಡದೆ ತಮ್ಮ ಸ್ವಾವವಾಲಂಬನೆ ಮಾಡಿಕೊಳ್ಳಬೇಕು. ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ : ಆಗಸ್ಟ್‌ ೧೯ರಂದು ವಿವಿಧೆಡೆ ಅಡಿಕೆ ಧಾರಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ಅಧಿಕಾರಾವಧಿ ಪ್ರಾರಂಭವಾದಾಗಿನಿಂದ ಭೂಕುಸಿತ ಮತ್ತು ಪ್ರವಾಹದಂತಹ ವಿವಿಧ ಬಿಕ್ಕಟ್ಟುಗಳನ್ನು ನಿಭಾಯಿಸಿದ ಅನುಭವಗಳನ್ನು ವಿವರಿಸಿದ ಅವರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಾಧನೆಗಳನ್ನು ಗುರುತಿಸಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿಯ ಕಾರ್ಯವನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣಲು, ಉನ್ನತ ಗುರಿಗಳನ್ನು ಹೊಂದಲು ಮತ್ತು ಅವುಗಳನ್ನು ಸಾಧಿಸಲು ಶ್ರದ್ಧೆಯಿಂದ ಕೆಲಸ ಮಾಡುಂತೆ ಕಿವಿ ಮಾತು ಹೇಳಿದರು.

ಇದನ್ನೂ ಓದಿ :  ನಾಳೆಯಿಂದ ಮೂರು ದಿನ ಆರಾಧನಾ‌ ಮಹೋತ್ಸವ

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ರ‌್ಯಾಂಕ್ ಗಳಿಸಿದವರನ್ನು, ಕ್ಲಾಸ್ ಟಾಪರ್ ಗಳನ್ನು, ಶೇ.೧೦೦ ಅಂಕಗಳಿಸಿದ ವಿದ್ಯಾರ್ಥಿನಿಯರನ್ನು ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಉಪನ್ಯಾಸಕಿ ರುಕ್ಸಾರ್ ಅಂಜುಮ್ ಸ್ವಾಗತಿಸಿ, ಉಪನ್ಯಾಸಕಿ ಆಯೇಶಾ ಸಮ್ರೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ :  ರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ಸಾಧನೆ

ಶೈದಾ ಇಕ್ಕೇರಿ ವಾರ್ಷಿಕ ವರದಿ ಮಂಡಿಸಿದರು. ತಬಸ್ಸುಮ್ ಶೇಖ್ ವಂದಿಸಿದರು. ವೇದಿಕೆ ಕಾರ್ಯಕ್ರಮವನ್ನು ಐನಾ ಸಫ್ವಾ ಮತ್ತು ಹನಿಯಾ ಕೌಸರ್ ನಿರ್ವಹಿಸಿದರು. ಸಾಂಸ್ಕೃತಿಕ ವಿಭಾಗವನ್ನು ರಾಹತ್ ಮತ್ತು ಸುವಾದ್ ಮುನ್ನಡೆಸಿದರು.

ಇದನ್ನೂ ಓದಿ : ರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ಸಾಧನೆ

ಸೀಮಾ ಕಾಸಿಮ್ ಅಧ್ಯಕ್ಷತೆ ವಹಿಸಿದ್ದರು. ಅಂಜುಮನ್ ಪದವಿ ಕಾಲೇಜಿನ ಪ್ರಾಂಶುಪಾಲೆ ರೈಸಾ ಶೇಖ, ಅಂಜುಮನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಫರ್ಜಾನಾ ಮೊಹತೆಶಾಮ್, ಸಾದಿಕಾ ಕಾಜಿಯಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ :  ಸಂಭ್ರಮದ ನೂಲು ಹುಣ್ಣಿಮೆ ಆಚರಣೆ

ಆರಂಭದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಯೂನೂಸ್ ಕಾಜಿಯಾ, ಪ್ರಧಾನ ಕಾರ್ಯದರ್ಶಿ ಇಸ್ಹಾಕ್ ಶಾಬಂದ್ರಿ, ಡಾ.ಸಲೀಂ ಎಸ್.ಎಂ. ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ (DC Lakshmipriya)
ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.