ಭಟ್ಕಳ(Bhatkal): ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕಾದ ಅನಿವಾರ್ಯತೆ ಹೆಚ್ಚಿದೆ. ಆಧುನಿಕ ಸಂಸ್ಕೃತಿಯಿಂದ ನಮ್ಮ ಪೂರ್ವಿಕರು ಹಾಕಿ ಕೊಟ್ಟ ಸಂಸ್ಕೃತಿ ಮರೆಯುತ್ತಿದ್ದೇವೆ. ಬಾಲ್ಯದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದ್ದಲ್ಲಿ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನು ನಮ್ಮ ಸಮಾಜಕ್ಕೆ ನೀಡಬಹುದುಎಂದು ಭಟ್ಕಳದ ಗಾಣಿಗ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಸುಭಾಷ ಎಂ ಶೆಟ್ಟಿ ಹೇಳಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಅವರು ಗಾಣಿಗ ಸಮಾಜ ಸೇವಾ ಟ್ರಸ್ಟ್, ಗೋಪಾಲಕೃಷ್ಣ ಪತ್ತಿನ ಸಹಕಾರಿ ಸಂಘ ಮತ್ತು ಶ್ರೀ ಮುಗಳಿಕೋಣೆ ಗೋಪಾಲಕೃಷ್ಣ ದೇವಸ್ಥಾನ ಆಡಳಿತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಸಭಾಭವನದಲ್ಲಿ ಆಯೋಜಿಸಿದ್ದ ೧೦ನೇ ವರ್ಷದ ಮುದ್ದು ರಾಧೆ ಹಾಗೂ ಮುದ್ದು ಕೃಷ್ಣ ಸ್ಪರ್ಧಾ ಕಾರ್ಯಕ್ರಮದ (Contest) ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ : ಬ್ರಹ್ಮಾನಂದ ಸರಸ್ವತಿ ಶ್ರೀಗಳ ಆಶೀರ್ವಾದ ಪಡೆದ ಗಣ್ಯರು
ಬಹುಮಾನ ವಿತರಕರಾಗಿ ಆಗಮಿಸಿದ್ದ ಬೆಂಗಳೂರಿನ ಉದ್ಯಮಿ ಎ.ಪಿ. ಗಿರೀಶ, ವಿಜೇತ ಮುದ್ದು ಮಕ್ಕಳಿಗೆ ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ವಿತರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ಎಂ ಶೆಟ್ಟಿ, ಟ್ರಸ್ಟ್ ಉಪಾಧ್ಯಕ್ಷೆ ರಾಧಾ ಶೆಟ್ಟಿ, ವಿಶ್ವನಾಥ ಶೆಟ್ಟಿ ಸರ್ಪನ ಕಟ್ಟೆ, ಗಜಾನನ ಶೆಟ್ಟಿ ಮುರ್ಡೇಶ್ವರ, ಉಪಸ್ಥಿತರಿದ್ದರು.
ಇದನ್ನೂ ಓದಿ : ಆಗಸ್ಟ್ ೨೭ರಂದು ವಿವಿಧೆಡೆ ಅಡಿಕೆ ಧಾರಣೆ
ಪ್ರತಿ ವರ್ಷದಂತೆ ಈ ವರ್ಷ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮುದ್ದು ಮಕ್ಕಳು ಸ್ಪರ್ಧೆಯಲ್ಲಿ (contest) ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲಾ ಮುದ್ದು ಮಕ್ಕಳಿಗೂ ಅಭಿನಂದನಾ ಪತ್ರ ಮತ್ತು ವಿಶೇಷ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ದಿ ನ್ಯೂ ಇಂಗ್ಲೀಷ ಪಿ.ಯು ಕಾಲೇಜಿನ ೨೫ ವಿದ್ಯಾರ್ಥಿಗಳಿಂದ ಕೃಷ್ಣ ರೂಪಕ ನೃತ್ಯ, ಭಜನೆ, ಕಾರ್ಯಕ್ರಮ ಜನರ ಮನಸೂರೆಗೊಂಡಿತು.
ಇದನ್ನೂ ಓದಿ : ಬೈಕ್ ಡಿಕ್ಕಿಯಾಗಿ ಪಾದಚಾರಿಗೆ ಗಾಯ
ಟ್ರಸ್ಟಿಗಳು, ಗೋಪಾಲಕೃಷ್ಣ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು, ಸಿಬ್ಬಂದಿ, ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಅಪಾರ ಸಂಖ್ಯೆಯ ಪ್ರೇಕ್ಷಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಸಂಯೋಜಕ ಪ್ರಕಾಶ ಎಂ. ಶಿರಾಲಿ ಸ್ವಾಗತಿಸಿದರು. ಸಹ ಕಾರ್ಯದರ್ಶಿ ರಾಜೇಶ ಕೆ. ಶೆಟ್ಟಿ ವಂದಿಸಿದರು. ಕಾರ್ಯದರ್ಶಿ ಮನೋಜ್ ಶೆಟ್ಟಿ ಮತ್ತು ಉಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ವಿಜೇತರಿವರು :
ಮುದ್ದುಕೃಷ್ಣ- ಪುನರ್ವಿ ರಾಜೇಶ್ ಶೆಟ್ಟಿ ಬಸ್ತಿ (ಪ್ರಥಮ), ಶಮಿಕಾ ನಾಯ್ಕ (ದ್ವಿತೀಯ), ಧೀರಾ ಕಿರಣ ನಾಯ್ಕ (ತೃತೀಯ).
ಮುದ್ದುರಾಧೆ- ಸಮೃದ್ಧಿ ಮಹೇಶ್ ಆಚಾರ್ಯ (ಪ್ರಥಮ), ರುಹಾನಿ ರಾಜೇಂದ್ರ ಗಾಣಿಗ (ದ್ವಿತೀಯ), ಮೌಲ್ಯ ಕೆ ಮೊಗೇರ (ತೃತೀಯ)