ಭಟ್ಕಳ (Bhatkal): ಪಟ್ಟಣದ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಗೋಕುಲಾಷ್ಟಮಿ (Gokulashtami) ಸಂಭ್ರಮೋತ್ಸವ ಹಮ್ಮಿಕೊಳ್ಳಲಾಗಿತ್ತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳು ಕೃಷ್ಣ, ರಾಧೆಯ ವೇಷಭೂಷಣದಲ್ಲಿ ಬಂದು ಅಭಿನಯ ಹಾಗೂ ನೃತ್ಯ ಪ್ರದರ್ಶನ ನೀಡಿದರು. ತಾಯಿ-ಮಗುವಿನ ಯಶೋಧ-ಕೃಷ್ಣ ನೃತ್ಯ ಪ್ರದರ್ಶನವು ನೋಡುಗರ ಪ್ರಶಂಸೆಗೆ ಪಾತ್ರವಾಯಿತು.
ಇದನ್ನೂ ಓದಿ : ಆಗಸ್ಟ್ ೨೯ರಂದು ವಿವಿಧೆಡೆ ಅಡಿಕೆ ಧಾರಣೆ
ಗೋಕುಲಾಷ್ಟಮಿ (Gokulashtami) ಸಂಭ್ರಮೋತ್ಸವ ಕಾರ್ಯಕ್ರಮವನ್ನು ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಚೇರಮನ್ ಡಾ. ಸುರೇಶ ನಾಯಕ ಉದ್ಘಾಟಿಸಿದರು. ಟ್ರಸ್ಟಿ ರಾಜೇಶ ನಾಯಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ೬೦ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.
ಇದನ್ನೂ ಓದಿ : ಪಾರ್ಕಿಂಗ್ ಸ್ಥಳಕ್ಕಾಗಿ ಟ್ಯಾಕ್ಸಿ ಚಾಲಕ-ಮಾಲಕರ ಮನವಿ