ಭಟ್ಕಳ(Bhatkal): ಇಲ್ಲಿನ ಕರಿಕಲ್ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ (Chathurmasya end) ವ್ರತದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಕೊನೆಯ ದಿನದ ಸೀಮೋಲ್ಲಂಘನ (seemollanghana) ಕಾರ್ಯಕ್ರಮ ಇಂದು ಶುಕ್ರವಾರ ಯಶಸ್ವಿಯಾಗಿ ನಡೆಯಿತು(Chathurmasya end).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬೆಳಿಗ್ಗೆ ೯.೩೦ಕ್ಕೆ ಕರಿಕಲ್ ಧ್ಯಾನ ಮಂದಿರದಿಂದ ಶ್ರಂಗಾರಗೊಂಡ ಅವರ ವಾಹನದ ಮೇಲೆ ವಿರಾಜಮಾನರಾದ ಶ್ರೀಗಳನ್ನು, ಬೈಕ್ ಹಾಗೂ ಕಾರಿನ ಮೆರವಣಿಗೆ ಮೂಲಕ ಶಿರಾಲಿ ಸಾರದಹೊಳೆ ಶ್ರೀ ಹಳೆಕೋಟೆ ಹನುಮಂತ ದೇವಸ್ಥಾನಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಶ್ರೀಗಳನ್ನು ಪೂರ್ಣ ಕುಂಭ ಸ್ವಾಗತ ಮಾಡಲಾಯಿತು.
ಇದನ್ನೂ ಓದಿ : ಸೆ.೪ರಂದು ದೈವಜ್ಞ ಬ್ರಾಹ್ಮಣರ ಟಾಪರ್ಗಳಿಗೆ ವಿದ್ಯಾರ್ಥಿವೇತನ ವಿತರಣೆ
ಬಳಿಕ ಶ್ರೀಗಳು ಸಾರದಹೊಳೆ ನದಿ ತೀರದಲ್ಲಿಗಂಗಾರತಿ ಪೂಜೆ ನೆರವೇರಿಸಿದರು. ನಂತರ ಶ್ರೀ ಹನುಮಂತ ದೇವರಿಗೆ ಶ್ರೀಗಳ ಸಮ್ಮುಖದಲ್ಲಿ ಪೂಜೆ ನೆರವೇರಿತು. ಸಾರದಹೋಳೆ ಹಳೆ ಕೋಟೆ ಹನುಮಂತ ದೇವಸ್ಥಾನದ ಆಡಳಿತ ಮಂಡಳಿಯವರು ಶ್ರೀಗಳಿಗೆ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸಚಿವ ಮಂಕಾಳ ವೈದ್ಯ, ಬೆಳ್ತಂಗಡಿ ಶಾಸಕ ಹರೀಶ ಪೂಂಜಾ, ಮಾಜಿ ಶಾಸಕ ಸುನೀಲ ನಾಯ್ಕ, ಭಟ್ಕಳ ನಾಮಧಾರಿ ಸಮಾಜದ ಅಧ್ಯಕ್ಷ ಅರುಣ ನಾಯ್ಕ, ಸಾರದಹೋಳೆ ಹಳೆ ಕೋಟೆ ಹನುಮಂತ ದೇವಸ್ಥಾನ ಅಧ್ಯಕ್ಷರು, ಉತ್ತರ ಪ್ರದೇಶದ ಸಾಧುಸಂತರ ಮಂಡಲಾಧ್ಯಕ್ಷರಾದ ಇಬ್ಬರು ಸ್ವಾಮೀಜಿಗಳು ಹಾಗೂ ನಾಮಧಾರಿ ಸಮಾಜದ ಮುಖಂಡರು, ಸಮಾಜ ಬಾಂಧವರು ಪಾಲ್ಗೊಂಡಿದ್ದರು (chathurmasya end).
ಈ ಸುದ್ದಿಗೆ ಸಂಬಂಧಿಸಿದ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ ನಲ್ಲಿ ವೀಕ್ಷಿಸಬಹುದಾಗಿದೆ.