ಭಟ್ಕಳ :ತಾಲೂಕಿನ ಸೋಡಿಗದ್ದೆ ಕ್ರಾಸ್ ಹತ್ತಿರದ ಮನೆಯೊಂದರಲ್ಲಿ ರಾತ್ರಿ ಹೊತ್ತಿನಲ್ಲಿ ಕಳ್ಳರು ಹಣ ಹಾಗೂ ಚಿನ್ನ, ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ಜರುಗಿದೆ. ಶನಿವಾರ ರಾತ್ರಿಯಿಂದ ರವಿವಾರ ಬೆಳಿಗಿನ ಅವಧಿಯಲ್ಲಿ ಈ ಕಳ್ಳತನ ನಡೆದಿರುವ ಬಗ್ಗೆ ಶಂಕೆಯಿದೆ.

ಇದನ್ನೂ ಓದಿ: ಹಿರಿಯ ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ

ಮನೆಯ ಮಾಲೀಕರಾದ ಎಂ.ಬಿ.ನಾಯ್ಕ ಬೆಂಗಳೂರಿನಲ್ಲಿ ಇರುವವರಾಗಿದ್ದು, ವಕೀಲ ವೃತ್ತಿ ಮಾಡುತ್ತಿದ್ದಾರೆ. ಮನೆಯನ್ನು ನೋಡಿಕೊಳ್ಳುತ್ತಿದ್ದವರು ಇಂದು ಬೆಳಿಗ್ಗೆ ಬಂದು ನೋಡಿದಾಗ ಕಳ್ಳತನವಾದ ಬಗ್ಗೆ ತಿಳಿದು ಬಂದಿದೆ. ಮನೆಯ ಮುಂದಿನ ಬಾಗಿಲು ಒಡೆದು, ನಂತರ ಬೆಡ್ ರೂಮಿನ ಬಾಗಿಲನ್ನು ಒಡೆದಿದ್ದಾರೆ. ಅಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದನ್ನು ಕಳ್ಳತನ ಮಾಡಿದ್ದಾರೆ.

ಗ್ರಾಮೀಣ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಕ್ರಮ ವಹಿಸಿದ್ದಾರೆ.

ಇದನ್ನೂ ಓದಿ: ನಮ್ಮ ನೂತನ ವೆಬ್‌ಸೈಟ್‌ “ಭಟ್ಕಳ ಡೈರಿ”ಗೆ ತಮಗೆಲ್ಲರಿಗೂ ಆತ್ಮೀಯ ಸ್ವಾಗತ