ಭಟ್ಕಳ (Bhatkal): ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಬಾಲಕನನ್ನು ಕರಾವಳಿ ಕಾವಲು ಪಡೆಯ (coast guard) ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಗಣೇಶ ಚತುರ್ಥಿಯ (Ganesh chathurti) ಮರು ದಿನವಾದ ಇಂದು ರವಿವಾರ ಈ ಘಟನೆ ನಡೆದಿದೆ. ಶ್ರೀ ಕುಟುಮೇಶ್ವರ ದೇವಸ್ಥಾನದ ಆವರಣದಲ್ಲಿ ಗಣೇಶೋತ್ಸವ (Ganeshotsava)  ಆಚರಿಸಲಾಗಿತ್ತು. ಸಂಜೆ ವಿಸರ್ಜನೆಯ ಸಂದರ್ಭದಲ್ಲಿ ಸ್ಥಳೀಯ ಬಾಲಕರು ತಲಗೋಡ ಕಡಲ ತೀರದಲ್ಲಿ ಈಜಾಡುತ್ತಿದ್ದರು. ಅವರಲ್ಲಿ ಸಮರ್ಥ ಶ್ರೀಧರ ಖಾರ್ವಿ (14) ಇದ್ದಕ್ಕಿದ್ದಂತೆ ಮುಳುಗಲು ಪ್ರಾರಂಭಿಸಿದ್ದಾನೆ. ಈ ಸಂದರ್ಭದಲ್ಲಿ ಕರಾವಳಿ ಕಾವಲು ಪಡೆಯ (coast guard) ಸಿಬ್ಬಂದಿ ಸಚಿನ್ ಖಾರ್ವಿ ಹಾಗೂ ರಾಘವೇಂದ್ರ ನಾಯ್ಕ ಬಾಲಕನ ನೆರವಿಗೆ ದಾವಿಸಿ ಮುಳುಗುತ್ತಿರುವ ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

ವಿಡಿಯೋ ಸಹಿತ ಇದನ್ನೂ ಓದಿ : ಮಹಿಳೆಯ ಚಿಕಿತ್ಸೆಗೆ ಸ್ಪಂದಿಸಿದ ಅಪ್ಪು ಅಭಿಮಾನಿಗಳು

ಹೆಚ್ಚಿನ ಚಿಕಿತ್ಸೆಗಾಗಿ ಅಸ್ವಸ್ಥ ಬಾಲಕನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರಾಣದ ಹಂಗು ತೊರೆದು ಬಾಲಕನ ರಕ್ಷಣೆ ಮಾಡಿದ ಕರಾವಳಿ ಕಾವಲು ಪಡೆಯ ಸಿಬ್ಬಂದಿಯನ್ನು, ಪಿಐ ಕೆ.ಕುಸುಮಧರ, ಸ್ಥಳೀಯರು ಅಭಿನಂದಿಸಿದ್ದಾರೆ.

ಇದನ್ನೂ ಓದಿ :  ಬೈಕ್‌ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು