ಭಟ್ಕಳ (Bhatkal) :  ಇಲ್ಲಿನ ಅರಣ್ಯ ಇಲಾಖೆಯಲ್ಲಿ (forest department) ಕಳೆದ ೩೩ ವರ್ಷಗಳಿಂದ ಹಿರಿಯ ಚಾಲಕನಾಗಿ ಸೇವೆ ಸಲ್ಲಿಸುತ್ತಿರುವ ಪಿ. ಶೇಷು ಅವರಿಗೆ ಅರಣ್ಯ ಇಲಾಖೆಯಿಂದ ಶೌರ್ಯ ಪ್ರಶಸ್ತಿ (bravery award) ನೀಡಿ ಗೌರವಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ರಾಜ್ಯ ಅರಣ್ಯ ಇಲಾಖೆಯಲ್ಲಿ ಅಪ್ರತಿಮ ಸೇವೆ ಮತ್ತು ಗಣನೀಯ ಸೇವೆ ಸಲ್ಲಿಸಿರುವವರಿಗೆ ಶೌರ್ಯ ಪ್ರಶಸ್ತಿ (bravery award) ನೀಡಲಾಗುತ್ತಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ (Bengaluru) ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಶೌರ್ಯ ಪ್ರಶಸ್ತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಅರಣ್ಯ ಸಚಿವರಾದ (Forest Minister) ಈಶ್ವರ ಖಂಡ್ರೆ(Eshwar Khandre), ಹಾಗೂ ಉನ್ನತ ಅದಿಕಾರಿಗಳು ಉಪಸ್ಥಿತರಿದ್ದರು. ಪಿ.ಶೇಷು ಶೌರ್ಯ ಪ್ರಶಸ್ತಿ ಪಡೆದಿದ್ದಕ್ಕೆ ಭಟ್ಕಳದ ಹಲವು ಸಂಘ ಸಂಸ್ಥೆಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :  ಮದ್ಯದ ಅಮಲಿನಲ್ಲಿ ಬಾವಿಗೆ ಬಿದ್ದು ಯುವಕ ಮೃತ್ಯು