ಚಿಕ್ಕೋಡಿ (Chikkodi) : ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ.  ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನನ್ನು ಬಂಧಿಸಲಾಗಿದೆ (Teacher Arrest)

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ನಿನ್ನೆ ತಡರಾತ್ರಿ ಆರೋಪಿ ಶಿಕ್ಷಕ ಸಾದಿಕ್‌ ಬೇಗ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ (Teacher Arrest). ನಿರಂತರ ಆರು ತಿಂಗಳಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಎಲ್ಲ ಧರ್ಮದವರು ಒಟ್ಟಾಗಿ ಪೂಜಿಸುವ ಗಣೇಶ !

ಲೈಂಗಿಕ ಕಿರುಕುಳ ಬಗ್ಗೆ ಓರ್ವ ಬಾಲಕಿ ಪಾಲಕರಿಗೆ ತಿಳಿಸಿದ್ದಳು. ಇದರ ಬೆನ್ನಲ್ಲೇ ತಮಗೂ ಲೈಂಗಿಕ ಕಿರುಕುಳ ನೀಡಿದ್ದಾನೆಂದು ೧೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹೇಳಿದ್ದಾರೆ. ಮಕ್ಕಳ ಪೋಷಕರು ಚಿಕ್ಕೋಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ (case registered) ಪೊಲೀಸರು ತಡರಾತ್ರಿ  ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ :  ಸೆಪ್ಟೆಂಬರ್‌ ೧೪ರಂದು ಸೊರಬದಲ್ಲಿ ಅಡಿಕೆ ಧಾರಣೆ