ಕುಮಟಾ (kumta): ಇಲ್ಲಿರುವ ನಾದಶ್ರೀ ಕಲಾಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRP) ಬಿ ಸಿ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧರ್ಮಸ್ಥಳದ (Dharmasthala) ಧರ್ಮಾಧಿಕಾರಿ ವೀರೇಂದ್ರ ಹೆಗ್ದೆ (Veerendra Heggade) ಅವರ ಶೈಕ್ಷಣಿಕ ಕಾಳಜಿ ಪ್ರತೀಕವಾಗಿರುವ ಸುಜ್ಞಾನನಿಧಿ ಕಾರ್ಯಕ್ರಮದಡಿ ಶಿಷ್ಯವೇತನ (stipend) ವಿತರಿಸುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾಲೂಕಿನ ೨೩೬ ವಿದ್ಯಾರ್ಥಿಗಳಿಗೆ ಈ ಶಿಷ್ಯವೇತನದ ಮಂಜೂರಾತಿ ಪತ್ರವನ್ನು  ಜೆಡಿಎಸ್ (JDS) ಮುಖಂಡ ಸೂರಜ್ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ, ಹಿರಿಯರಾದ ವಾಸುದೇವ ನಾಯ್ಕ ವಿತರಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೂರಜ್ ನಾಯ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ವಿರೇಂದ್ರ ಹೆಗ್ಗಡೆಯವರು ಬ್ಯಾಂಕ್‌ ಮೂಲಕ ಹಣಕಾಸಿನ ವ್ಯವಸ್ಥೆ ಅಷ್ಟೆ ಅಲ್ಲದೇ ಶಿಕ್ಷಣ, ಸಮಾಜ ಅಭಿವೃದ್ಧಿ, ಗ್ರಾಮೀಣ ಅಭಿವೃದ್ದಿಗೆ ಒತ್ತು ನೀಡಿದ್ದಾರೆ. ಗ್ರಾಮೀಣ ಜನರ ಬದುಕನ್ನು ಹಸನುಗೊಳಿಸುವುದರ ಜೊತೆಗೆ ಮಹಿಳೆಯರ ಸ್ವಾವಲಂಬಿನೆ ಬದುಕಿಗೆ ಹತ್ತಾರು ಕಾರ್ಯಕ್ರಮಗಳ ಮೂಲಕ ಸಾಕಷ್ಟು ಅನುಕೂಲವಾಗಿದೆ ಎಂದು ಹೇಳಿದರು.

ಇದನ್ನೂ ಓದಿ :  ಜಾನುವಾರು ಅಕ್ರಮ ಸಾಗಾಟ: ನಾಲ್ವರ ಬಂಧನ

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ ಮಾತನಾಡುತ್ತ, ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಲ್ಲಿ ಆರ್ಥಿಕ ಸ್ವಾವಲಂಬನೆ ಬಂದಿದೆ. ಇದರಿಂದ ಗ್ರಾಮಿಣ ಮಹಿಳೆಯರ ಸಬಲೀಕರಣ ಆಗಿದೆ. ಗ್ರಾಮೀಣ ಮಟ್ಟದ ಎಷ್ಟೋ ಮಹಿಳೆಯರಿಗೆ ಯೋಜನೆ ದಾರಿ ದೀಪವಾಗಿದೆ. ಅಷ್ಟೇ ಅಲ್ಲದೆ ತಾಲೂಕಿನ ತೀರಾ ಹಳ್ಳಿ ಪ್ರದೇಶದ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶೈಕ್ಷಣಿಕ ಹಿನ್ನಡೆಯಾಗುವುದನ್ನು ತಪ್ಪಿಸಲು ಧರ್ಮಸ್ಥಳ ಧರ್ಮಾಧಿಕಾರಿಗಳು ಶಾಲೆಗಳಿಗೆ ಶಿಕ್ಷಕರನ್ನು ಒದಗಿಸಿದ್ದಾರೆ. ಇದು ಶೈಕ್ಷಣಿಕವಾಗಿ ಬಹಳ ಅನುಕೂಲವಾಗಿದೆ ಎಂದರು.

ಇದನ್ನೂ ಓದಿ : Teacher Arrest/ ೬ ತಿಂಗಳಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ

ಉತ್ತರ ಕನ್ನಡ (Uttara Kannada) ಜಿಲ್ಲೆಯ ಯೋಜನೆಯ ನಿರ್ದೇಶಕ ಮಹೇಶ ಎಂ.ಡಿ. ಮಾತನಾಡಿ, ಕುಮಟಾ ತಾಲೂಕಿನಲ್ಲಿ ಈ ವರ್ಷ ಒಟ್ಟು ೨೩೬ ವಿದ್ಯಾರ್ಥಿಗಳಿಗೆ ವಿತರಣೆ ಆಗಿದೆ. ಇದುವರೆಗೂ ಒಟ್ಟು ೩೩೩ ವಿಧ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯ ವೇತನ (stipend) ವಿತರಣೆ ಆಗಿದೆ. ಅಲ್ಲದೆ ಜಿಲ್ಲೆಯಲ್ಲಿ ಸಂಘದ ಸದಸ್ಯರ ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ೪೯೮೨ ವಿದ್ಯಾರ್ಥಿಗಳಿಗೆ ೫.೭೭ ಕೋಟಿ ರೂ. ಮೊತ್ತದ ಸುಜ್ಞಾನನಿಧಿ ಶಿಷ್ಯವೇತನ ವಿತರಿಸಲಾಗಿದೆ. ವಿದ್ಯಾರ್ಥಿಗಳು ವಿದ್ಯೆ ಸಂಪತ್ತಾಗಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮ ಹಾಕಬೇಕು. ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸುವಂತಾಗಬೇಕು ಎಂದು ಹೇಳಿದರು

ವಿಡಿಯೋ ಸಹಿತ ಇದನ್ನೂ ಓದಿ :  ಲಾಭದಲ್ಲಿ ವಿಎಸ್‌ಎಸ್‌ ಬ್ಯಾಂಕ್‌

ಕುಮಟಾ ತಾಲೂಕಿನ ಯೋಜನಾಧಿಕಾರಿ ಕಲ್ಮೇಶ ಎಂ. ಸ್ವಾಗತಿಸಿದರು. ಮೇಲ್ವಿಚಾರಕ ಕೇಶವ ನಿರೂಪಿಸಿದರು. ಜನಜಾಗೃತಿ ವೇದಿಕೆಯ ಯೋಗಾನಂದ ಗಾಂಧಿ, ಹಿರಿಯ ಮುಖಂಡ ವಾಸುದೇವ ನಾಯ್ಕ, ಒಕ್ಕೂಟ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.