ಶಿವಮೊಗ್ಗ(Shivamogga) : ಕರ್ನಾಟಕ ಲೋಕಾಯುಕ್ತ (Lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆಪ್ಟೆಂಬರ್-೨೦೨೪ರ ತಿಂಗಳ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಸೆ. ೨೧ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಸೊರಬ (Soraba) ತಾಲೂಕು ಕಚೇರಿ ಸಭಾಂಗಣ, ಸೆ.೨೪ರ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ತೀರ್ಥಹಳ್ಳಿ (Tirthahalli) ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಶಿಕಾರಿಪುರ (Shikaripara) ತಾಲೂಕು ಕಚೇರಿ ಸಭಾಂಗಣ, ಸೆ.೨೫ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಸಾಗರ (Sagar) ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಹೊಸನಗರ (Hosanagar) ತಾಲೂಕು ಕಚೇರಿ ಸಭಾಂಗಣ, ಸೆ.೨೬ರಂದು ಬೆಳಿಗ್ಗೆ ೧೧ಗಂಟೆಯಿಂದ ಮಧ್ಯಾಹ್ನ ೧೨.೩೦ ರವರೆಗೆ ಭದ್ರಾವತಿ (Bhadravati) ತಾಲೂಕು ಪಂಚಾಯಿತಿ ಸಭಾಂಗಣ, ಸೆ.೨೭ರಂದು ಬೆಳಿಗ್ಗೆ ೧೧ಗಂಟೆಯಿಂದ ಮಧ್ಯಾಹ್ನ ೧೨.೩೦ರವರೆಗೆ ಶಿವಮೊಗ್ಗ (Shivamogga) ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
ಇದನ್ನೂ ಓದಿ : ARM Cinema/ ಪ್ಯಾನ್ ಇಂಡಿಯಾ ಸ್ಟಾರ್ ಆದ ಟೋವಿನೋ ಥಾಮಸ್!
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ (Lokayukta) ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.