ಭಟ್ಕಳ (Bhatkal): ಕಾಂಗ್ರೆಸ್ (Congress) ಸರ್ಕಾರ ಈಗ ಅಧಿಕಾರದಲ್ಲಿದ್ದು ತನ್ನ ಸೇಡನ್ನು ತೀರಿಸಿಕೊಳ್ಳಲು ದ್ವೇಷ ರಾಜಕಾರಣ ಮಾಡುತ್ತಿದೆ. ಅವರು ನಮ್ಮ ಬಿಜೆಪಿ (BJP) ಶಾಸಕರಿಗೆ ನೋಟಿಸ್ ಸಹ ನೀಡದೆ ನೇರವಾಗಿ ದಸ್ತಗಿರಿ ಮಾಡಲು ಹೊರಟಿದ್ದಾರೆ. ಇದು ಖಂಡನೀಯ. ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದೇವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಹೇಳಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಅವರು (MP Kageri) ಬುಧವಾರದಂದು ಭಟ್ಕಳದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಮ್ಮ ಹೆಂಡತಿ ಹೆಸರಲ್ಲಿ ಭೂಕಬಳಿಕೆ ಮಾಡಿದ್ದು ದೊಡ್ಡ ಹಗರಣವಾಗಿದೆ ಈ ಕಾರಣದಿಂದ ಇವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯದೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ವಿಡಿಯೋ ಸಹಿತ ಇದನ್ನೂ ಓದಿ : ಅನಂತಕುಮಾರ ಹೆಗಡೆಗೆ ಟಿಕೆಟ್ ತಪ್ಪಲು ನಾನೇ ಕಾರಣ ಎಂದ ಬಿಜೆಪಿ ಮುಖಂಡ
ಮೊನ್ನೆ ದಿನ ಈದ್ ಮಿಲಾದ್ (eid milad) ಸಂಭ್ರಮಾಚರಣೆ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ (chikkamagaluru) ಪ್ಯಾಲೆಸ್ತೀನ್ ಧ್ವಜವನ್ನು ಹಾರಾಡಿಸಿದ ವ್ಯಕ್ತಿಗಳ ಮೇಲೆ ಪೊಲೀಸರು ಸೊಮೊಟೊ ಕೇಸನ್ನು ದಾಖಲಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಾವು ಸಂಘಟನಾತ್ಮಕವಾಗಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ : ಸೆಪ್ಟೆಂಬರ್ ೧೮ರಂದು ವಿವಿಧೆಡೆ ಅಡಿಕೆ ಧಾರಣೆ
ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಜಿಲ್ಲಾ ಕಾರ್ಯದರ್ಶಿಗಳಾದ ಸುಬ್ರಾಯ ದೇವಾಡಿಗ, ಶ್ರೀಕಾಂತ ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶಿವಾನಿ ಶಾಂತರಾಮ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ನಾಯ್ಕ, ಶ್ರೀಧರ ನಾಯ್ಕ, ಮಂಡಲ ಉಪಾಧ್ಯಕ್ಷರಾದ ಗಣಪತಿ ದೇವಾಡಿಗ, ಮಂಜಪ್ಪ ನಾಯ್ಕ ಹಿಂದುಳಿದ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ರವಿ ನಾಯ್ಕ, ಜಿಲ್ಲಾ ಮೀನುಗಾರಿಕಾ ಪ್ರಕೋಷ್ಠ ಸಂಚಾಲಕ ಭಾಸ್ಕರ ದೈಮನೆ, ಗ್ರಾಮೀಣ ಹಾಗೂ ಪಂಚಾಯತ ರಾಜ್ ಜಿಲ್ಲಾ ಸಹ ಸಂಚಾಲಕ ಮೋಹನ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಪ್ಯಾನ್ ಇಂಡಿಯಾ ಸ್ಟಾರ್ ಆದ ಟೋವಿನೋ ಥಾಮಸ್!