ಭಟ್ಕಳ (Bhatkal): ಇಲ್ಲಿನ ಕರ್ನಾಟಕ ರಾಜ್ಯ ನಿವೃತ್ತ ನೌಕರರ (retired employees) ಸಂಘದ ವತಿಯಿಂದ ಬೇಡಿಕೆ ಈಡೇರಿಸುವಂತೆ ಮೆರವಣಿಗೆ ಮೂಲಕ ಬಂದು ಸಹಾಯಕ ಆಯುಕ್ತರಿಗೆ ಗುರುವಾರದಂದು ಮನವಿ ಸಲ್ಲಿಸಲಾಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ದಿನಾಂಕ ೩೧.೭.2024ರ ಅವಧಿಯಲ್ಲಿ ಸೇವೆಯಿಂದ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅಥವಾ ಸೇವೆಯಲ್ಲಿರುವುದು ಸಮಾಪ್ತಿಗೊಂಡ ಸರ್ಕಾರಿ ಪ್ರಕರಣಗಳಲ್ಲಿ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿಗದಿಪಡಿಸಲಾದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಲೆಕ್ಕ ಹಾಕುವ ಉದ್ದೇಶಗಳಿಗಾಗಿ ಪರಿಗಣಿಸಬೇಕಾಗುತ್ತದೆ. ಆದರೆ ಸದರಿ ಕಾಲ್ಪನಿಕ ಪುನರ್ ನಿಗದಿಯ ಆರ್ಥಿಕ ಲಾಭವು ನಿವೃತ್ತಿ ಹೊಂದಿದ ಸರ್ಕಾರಿ ನೌಕರನಿಗೆ ಅಥವಾ ಮರಣ ಹೊಂದಿದ ಸರ್ಕಾರಿ ನೌಕರನ ಫಲಾನುಭವಿಗೆ ಸಂದರ್ಭಾನುಸಾರ ದಿನಾಂಕ: ೧.೮.೨೦೨೪ರಿಂದ ಪ್ರಾಪ್ತವಾಗತಕ್ಕದ್ದು”.ಈ ಆದೇಶದನ್ವಯ ದಿನಾಂಕ: ೧.೭.೨೨ರಿಂದ ೩೧.೭.೨೪ರವರೆಗೆ (೨೫ ತಿಂಗಳ ಅವಧಿಯಲ್ಲಿ) ನಿವೃತ್ತರಾದ/ನಿಧನ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ ವೇತನದನ್ವಯ DCRG, COMMUTATION (OPTION) (5) EL ENCASHMENT ಲೆಕ್ಕಾಚಾರ ಮಾಡದೆ ಹಳೆಯ ವೇತನ ಶ್ರೇಣಿಯ ಮೇಲೆಯೇ ಪರಿಗಣಿಸುತ್ತಿರುವುದು ನಿವೃತ್ತಿ ಜೀವನ ಸಂಧ್ಯಾಕಾಲದಲ್ಲಿರುವವರಿಗೆ ಅತೀವ ಆಘಾತವಾಗಿರುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಿಡಿಯೋ ಸಹಿತ ಇದನ್ನೂ ಓದಿ : ವಿಶ್ವಕರ್ಮ ಪೂಜಾ ಮಹೋತ್ಸವ ಸಂಪನ್ನ

ನಮ್ಮದಲ್ಲದ ಕಾರಣದಿಂದ ಆಗಸ್ಟ್ ೨೦೨೪ರಿಂದ ನಿವೃತ್ತಿ ಹೊಂದುವ ಅಧಿಕಾರಿ/ನೌಕರರು ಪರಿಷ್ಕೃತ ವೇತನದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯವು ಲಭ್ಯವಾಗುತ್ತಿದ್ದು, ಅವರಂತೆ ನಾವುಗಳೂ ಸಹ 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯಗಳನ್ನು ಪಡೆಯುವ ಅರ್ಹತೆ ಹೊಂದಿದ್ದೇವೆ. ಪ್ರಸ್ತುತ ಸೇವೆಯಲ್ಲಿರುವ ಇತರ ಅಧಿಕಾರಿ/ ನೌಕರರಂತೆ ನಾವು ಕೂಡ ದಿನಾಂಕ : ೧.೭.೨೨ ರಿಂದಲೇ ಪಡೆಯ ಬೇಕಿದ್ದ ನಿವೃತ್ತಿ ವೇತನದ ವ್ಯತ್ಯಾಸ ಬಾಕಿಯನ್ನು (Arrears) ಕೇಳುತ್ತಿರುವುದಿಲ್ಲ. ನಾವು ಕೇಳುತ್ತಿರುವುದು 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದ DCRG, COMMUTATION (OPTION) EL ENCASHMENT ಸೌಲಭ್ಯಗಳ ಲೆಕ್ಕಾಚಾರದ ವ್ಯತ್ಯಾಸ ಮಾತ್ರ. ಆದ್ದರಿಂದ ನಮಗೆ ಆಗುತ್ತಿರುವ ಆರ್ಥಿಕ ನಷ್ಟವನ್ನು ಅರ್ಥ ಮಾಡಿಕೊಂಡು ದಯಮಾಡಿ ಮೇಲಿನ ಅವಧಿಯಲ್ಲಿ ನಿವೃತ್ತರಾದವರಿಗೆ ಸಹ ಪರಿಸ್ಕ್ರತ ಮೂಲ ವೇತನದ ಮೇಲೆ DCRG, COMMUTATION (OPTION) EL ENCASHMENT ಲೆಕ್ಕಾಚಾರ ಮಾಡಿ ನ್ಯಾಯಯೋಜಚಿತವಾಗಿ ಲಭ್ಯವಾಗುವ ಆರ್ಥಿಕ ಸೌಲಭ್ಯವನ್ನು ದೊರಕಿಸಿ ಕೊಡಲು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : Palestine Sticker/ ಸಂಸದ ಕಾಗೇರಿ ಸೂಚನೆಗೆ ತಲೆಬಾಗಿದ ಪೊಲೀಸರು

ಈ ಸಂದರ್ಭದಲ್ಲಿ ಪರಮೇಶ್ವರ ಎನ್ ಭಟ್, ಅಣ್ಣಪ್ಪ ಬಾಳಪ್ಪ ಇಟಾಲ್ , ಜಿ.ಟಿ ಭಟ್, ಪ್ರೇಮ ಎಸ್.ಅಂಬಿಗ, ಶ್ರೀಧರ್ ಗಣಪತಿ ಹೆಗಡೆ ಮುಂತಾದ ನಿವೃತ್ತ ನೌಕರರು (retired employees) ಉಪಸ್ಥಿತರಿದ್ದರು.

ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ : ಹೊನ್ನಾವರದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ