ಕಾರವಾರ (Karwar): ಇಲ್ಲಿನ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಕಚೇರಿಯಲ್ಲಿ ಸೆ.೨೧ರಂದು ಮಧ್ಯಾಹ್ನ ೩.೩೦ರಿಂದ ಸಂಜೆ ೫.೩೦ ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆ (Consumer Meeting) ಯನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೆನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದುಕೊರತೆಗಳ ಅಹವಾಲುಗಳನ್ನು ನೀಡುವಂತೆ ಕಾರವಾರ ಕಾರ್ಯ ಪಾಲನಾ ಮತ್ತು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಹೊನ್ನಾವರದಲ್ಲಿ : ಇಲ್ಲಿನ ಉಪ ವಿಭಾಗ ಕಚೇರಿಯಲ್ಲಿ ಹೊನ್ನಾವರ (Honavar) ಉಪ-ವಿಭಾಗ ವ್ಯಾಪ್ತಿಯಲ್ಲಿ ಸೆ.೨೧ರಂದು ಬೆಳಗ್ಗೆ ೧೧ ಗಂಟೆಗೆ ವಿದ್ಯುತ್ ಅದಾಲತ್ (Electricity Court) ಹಾಗೂ ಮಧ್ಯಾಹ್ನ ೩.೩೦ ಗಂಟೆಗೆ ಗ್ರಾಹಕರ ಸಂವಾದ ಸಭೆ(Consumer Meeting)ಯನ್ನು ಹೊನ್ನಾವರ ಉಪ- ವಿಭಾಗ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಹೊನ್ನಾವರ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ೭ ದಿನದಲ್ಲಿ ೬೭ ಕೋಟಿ ರೂ. ದಾಟಿದ ‘ಎ.ಆರ್.ಎಂ.’