ಭಟ್ಕಳ(Bhatkal): ರಾಜ್ಯ ಗ್ರಾಮ ಆಡಳಿತ (village administration) ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ರಾಜ್ಯ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ವಿವಿಧ ಬೇಡಿಕೆಗಳ ಅನಿರ್ದಿಷ್ಟಾವಧಿ ಕರೆ ನೀಡುತ್ತಿರುವ ಬಗ್ಗೆ ತಾಲೂಕ ಘಟಕದಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕರ್ನಾಟಕ ರಾಜ್ಯ ಗ್ರಾಮ ಆಡಳಿತ (village administration) ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ನಿನ್ನೆ ಸೆ.೨೨ರಂದು ಚಿತ್ರದುರ್ಗದ (Chitradurga) ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಈ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ (karnataka) ೩೧ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಹಾಗೂ ಸರ್ವಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ಕೆಲ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ : ಅಂದರ ಬಾಹರ ಆಡುತ್ತಿದ್ದವರ ೭ ಬೈಕ್ ವಶಕ್ಕೆ
ಅದರಂತೆ ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್ ಟಾಪ್/ ಗೂಗಲ್ ಕ್ರೋಮ್ ಬುಕ್, ಪ್ರಿಂಟರ್, ಇಂಟರ್ ನೆಟ್ ಸೌಲಭ್ಯವನ್ನು ನೀಡುವವರೆಗೆ ಸೆ.೨೨ರಿಂದ ಮೊಬೈಲ್ ತಂತ್ರಾಂಶಗಳ ಕೆಲಸ ನಿರ್ವಹಿಸದಂತೆ ತೀರ್ಮಾನಿಸಲಾಗಿದೆ. ಆದ್ದರಿಂದ ಆಧಾರ್ ಸೀಡ್, ಲ್ಯಾಂಡ್ ಬಿಟ್, ಬಗರ್ ಹುಕುಂ, ಹಕ್ಕುಪತ್ರ, ನಮೂನೆ 1-5 ರ ವೆಬ್ ಅಪ್ಲಿಕೇಷನ್ , ಪೌತಿ ಆಂದೋಲನ ಅಪ್ ಮತ್ತಿತರ ಕೆಲಸ ನಿರ್ವಹಣೆ ಸ್ಥಗಿತಗೊಳ್ಳಲಿದೆ. ಅಲ್ಲದೆ ಇನ್ನಿತರ ವಿವಿಧ ಬೇಡಿಕೆಗಳು ಈಡೇರುವವರೆಗೂ ಸೆ.೨೬ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ವಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಆ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯಾವ್ಯಾಪಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಗಿದೆ.
ಇದನ್ನೂ ಓದಿ : ಚರಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ
ಈ ಕುರಿತ ಮನವಿ ಪತ್ರವನ್ನು ಇಂದು ಸೆ.೨೩ರಂದು ಸಂಘದ ತಾಲೂಕು ಘಟಕದಿಂದ ಭಟ್ಕಳ ಉಪವಿಭಾಗಾಧಿಕಾರಿ (Assistant commissioner) ಅವರಿಗೆ ಮನವಿ ಸಲ್ಲಿಸಲಾಗಿದೆ. ಸಮೂಹದ ಬೇಡಿಕೆಗಳನ್ನು ಈಡೇರಿಸಿ ಉತ್ತಮ ಮತ್ತು ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕ ಮತ್ತು ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಸಂಘವು ಮನವಿಯಲ್ಲಿ ಆಗ್ರಹಿಸಿದೆ.
ಇದನ್ನೂ ಓದಿ : ಕಳುವಾದ ಮೊಬೈಲ್ ಪತ್ತೆ