ಭಟ್ಕಳ (Bhatkal): ತಾಲೂಕಿನಲ್ಲಿ ಶಂಕಿತ ಎರಡು ಕಾಲರಾ (cholera) ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಸವಿತಾ ಕಾಮತ ಮಾಹಿತಿ ನೀಡಿದ್ದಾರೆ. ಮೀನುಗಾರಿಕಾ ಮತ್ತು ಬಂದರು, ಒಳ ನಾಡು ಜಲ ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ (Mankal Vaidya) ಅವರ ಅಧ್ಯಕ್ಷತೆಯಲ್ಲಿ ತಾಲೂಕಾ ಪಂಚಾಯತ ಸಭಾಭವನದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿಪರಿಶೀಲನಾ ಸಭೆಯಲ್ಲಿ ಡಾ.ಸವಿತಾ ಕಾಮತ ಈ ಮಾಹಿತಿ ನೀಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಓರ್ವ ಜಾರ್ಖಂಡ್ (Jarkhand) ಮೂಲದವನಾಗಿದ್ದು ಇಲ್ಲಿಗೆ ಮೀನುಗಾರಿಕೆ ಕೆಲಸಕ್ಕೆ ಬಂದವರಾಗಿದ್ದಾರೆ. ಅವರನ್ನು ಕಾರವಾರದ (Karwar) ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಕೆ ಕಂಡು ಬಂದಿದೆ. ಇನ್ನು ಶಿರಾಲಿ ಮಾವಿನಕಟ್ಟೆಯ ಇನ್ನೋರ್ವ ನಿವಾಸಿಗೆ ಕಿಡ್ನಿ ವೈಫಲ್ಯ ಕೂಡ ಆಗಿದೆ. ಇವರನ್ನು ಭಟ್ಕಳದ ಸರಕಾರಿ ಆಸ್ಪತ್ರೆಯಲ್ಲಿ ಇರಿಸಿಕೊಳ್ಳಲಾಗಿದೆ. ಐ.ಸಿಯು.ದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ. ಇಬ್ಬರೂ ಸದ್ಯ ಆರೋಗ್ಯವಾಗಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ : ನರೇಗಾ ಕೂಲಿಕಾರರ ಮಗನಿಗೆ ೭ ಚಿನ್ನದ ಪದಕ
ಸದ್ಯ ಆರೋಗ್ಯ ಇಲಾಖೆಯಿಂದ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಶೌಚಾಲಯದ ವ್ಯವಸ್ಥೆ ಸರಿಪಡಿಸಬೇಕಿದೆ. ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಕಲ್ಪಿಸಿ ಬಯಲು ಶೌಚ ನಿಲ್ಲಿಸಬೇಕಾಗಿದೆ. ಹೀಗಾಗಿ ಎಲ್ಲಾ ಗ್ರಾಮ ಪಂಚಾಯತ, ಮೀನುಗಾರಿಕೆ ಇಲಾಖೆಗೆ ಸ್ವಚ್ಚತೆಯನ್ನು ಕಾಪಾಡಲು ಸೂಚಿಸಿದ್ದೇವೆ ಎಂದರು.
ಇದನ್ನೂ ಓದಿ : ಮೈಸೂರು ದಸರಾಕ್ಕೆ ಜಿಲ್ಲೆಯ ನೋಡಲ್ ಅಧಿಕಾರಿ ನೇಮಕ
ಸಚಿವ ಮಂಕಾಳ ವೈದ್ಯ ಪ್ರತಿಕ್ರಿಯಿಸಿ ಡೆಂಗ್ಯೂ (dengue) ಪ್ರಕರಣ ಕಡಿಮೆಯಾದ ಮೇಲೆ ಈಗ ಕಾಲರಾ (Cholera) ಪ್ರಕರಣ ಅರಂಭವಾಗಿದೆ. ಎಲ್ಲರೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಮೀನುಗಾರಿಕೆ ಬಂದರು ಸ್ಥಳದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ಸುದ್ದಿಗೆ ಸಂಬಂಧಿಸಿದ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : ಸೆಪ್ಟೆಂಬರ್ ೨೪ರಂದು ವಿವಿಧೆಡೆ ಅಡಿಕೆ ಧಾರಣೆ