ಭಟ್ಕಳ (Bhatkal) : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಯಿಂದ ೧೦ನೇ ತರಗತಿವರೆಗಿನ ಮಕ್ಕಳಿಗೆ ವಾರದಲ್ಲಿ ೬ ದಿನ ಮೊಟ್ಟೆ ವಿತರಿಸುವ (Egg distribution) ಕಾರ್ಯಕ್ರಮ ತಾಲೂಕಿನ ಹೆಬಳೆಯ ಗೊರಟೆಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಪ್ರಧಾನ ಮಂತ್ರಿ (prime minister) ಪೋಷಣ್ ಶಕ್ತಿ ನಿರ್ಮಾಣ, ಅಕ್ಷರ ದಾಸೋಹ ಯೋಜನೆಯಡಿ ಮೊಟ್ಟೆ ಅಥವಾ ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸಲು ಆದೇಶಿಸಿದ ಪ್ರಕಾರ ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ (Ajimji premji pratishtana) ಸಹಯೋಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಈ ಕಾರ್ಯಕ್ರಮ ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಶಾಲಾ ಮುಖ್ಯಾಧ್ಯಾಪಕ ನಾಗಪ್ಪಯ್ಯ ಆಚಾರ್ಯ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಇದನ್ನೂ ಓದಿ : ಸೆಪ್ಟೆಂಬರ್ ೨೫ರಂದು ವಿವಿಧೆಡೆ ಅಡಿಕೆ ಧಾರಣೆ
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣಪತಿ ನಾಯ್ಕ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸುವ (Egg distribution) ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಪಾಲಕ- ಪೋಷಕರು ಎಲ್ಲ ವಿದ್ಯಾರ್ಥಿಗಳಿಗೂ ಮೊಟ್ಟೆ ವಿತರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ರೇಖಾ ನಾಯ್ಕ, ಮಾಜಿ ಅಧ್ಯಕ್ಷ ಸುಬ್ರಾಯ ನಾಯ್ಕ, ಮಾಜಿ ಉಪಾಧ್ಯಕ್ಷೆ ಮಂಜುಳಾ ನಾಯ್ಕ, ಪಂಚಾಯತ್ ನ ಸದಸ್ಯರಾದ ಈರಪ್ಪ ನಾಯ್ಕ, ರಾಮ ಹೆಬಳೆ, ಶಕುಂತಲಾ ಮೊಗೇರ, ಶಾಲಾಭಿವೃದ್ಧಿ ಸಮಿತಿಯ ಎಲ್ಲ ಸದಸ್ಯರು, ಪಾಲಕ-ಪೋಷಕರು, ಸಹ ಶಿಕ್ಷಕ ಸುಬ್ರಹ್ಮಣ್ಯ ಪಟಗಾರ, ಅಡುಗೆ ಸಿಬ್ಬಂದಿ ಹಾಗೂ ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಜರಿದ್ದರು.
ವಿಡಿಯೋ ಸಹಿತ ಇದನ್ನೂ ಓದಿ : Shiruru landslide/ ಲಾರಿ ಸಹಿತ ಚಾಲಕನ ಮೃತದೇಹ ಪತ್ತೆ