ಭಟ್ಕಳ (Bhatkal): ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ (SGS College) ಮುಂಬೈನ (Mumbai) ಖ್ಯಾತ ಫ್ರೀಡಂ ಅಫ್ ಫ್ರೀ ಎಂಟರಪ್ರೈಸಸ್‌ನ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ನಾಯಕತ್ವ ವಿಕಸನ ಕಾರ್ಯಾಗಾರ (Workshop) ಜರುಗಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮುಖ್ಯ ತರಬೇತುದಾರ ವಿವೇಕ ಪಟ್ಕಿ ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಪ್ರತಿಯೊಂದು ಚಟುವಟಿಕೆಗಳನ್ನು ಅವಕಾಶವಾಗಿ ಸ್ವೀಕರಿಸಬೇಕು. ಆಗಲೇ ಯಶಸ್ಸು ಗಳಿಸಲು ಸಾಧ್ಯ” ಎಂದು ಕಿವಿಮಾತು ಹೇಳಿದರು. ಮತ್ತೋರ್ವ ತರಬೇತುದಾರ ರಾಜೀವ ಕುಮಾರ ಮಾತನಾಡಿ “ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಅಷ್ಟೇ ಶೃದ್ಧೆಯಿಂದ ಪಾಲ್ಗೊಳ್ಳಬೇಕು. ಅದು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ” ಎಂದರು.
ಇದನ್ನೂ ಓದಿ : ಹೈ ಅಲರ್ಟ್ ಆದ ಇಂಟೆಲ್ ಏಜೆನ್ಸಿಗಳು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಟ್ಕಳ ಎಜುಕೇಶನ್ ಟ್ರಸ್ಟನ ಅಧ್ಯಕ್ಷ ಡಾ. ಸುರೇಶ ನಾಯಕ, “ವಿದ್ಯಾರ್ಥಿಗಳು ಪದವಿಯ ಮೂರು ವರ್ಷಗಳನ್ನು ಸೂಕ್ತವಾಗಿ ಉಪಯೋಗಿಸಿ, ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು” ಎಂದು ಹೇಳಿದರು. ಟ್ರಸ್ಟೀ ಮ್ಯಾನೇಜರ್ ರಾಜೇಶ್ ನಾಯಕ ಮಾತನಾಡಿ, “ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸಂವಹನ ಕೌಶಲ್ಯ ಪ್ರಮುಖವಾದುದು. ಕಾರಣ ಸಂವಹನ ಕೌಶಲ್ಯನ್ನು ವೃದ್ಧಿಸಿಕೊಳ್ಳಲು ಹೆಚ್ಚು ಗಮನಹರಿಸಬೇಕು” ಎಂದು ಹೇಳಿದರು.
ಇದನ್ನೂ ಓದಿ : ಕಡಲಾಮೆಗಾಗಿ ೪ ಕೋಟಿ ವೆಚ್ಚದಲ್ಲಿ ಪುನರ್ವಸತಿ ಕೇಂದ್ರ ಸ್ಥಾಪನೆ
ಪ್ರಾಂಶುಪಾಲ ಶ್ರೀನಾಥ ಪೈ ಪ್ರಾಸ್ತಾವಿಕವಾಗಿ ಮಾತನಾಡಿ, ತರಬೇತಿ ಕಾರ್ಯಾಗಾರದ (Workshop) ಮಹತ್ವ ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪ್ರಮಾಣಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ವಿಭಾಗದ ಉಪಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಮುರ್ಡೇಶ್ವರದಿಂದ ತಿರುಪತಿಗೆ ನೇರ ರೈಲು