ಕಾರವಾರ (Karwar) : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು (KSTA) ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿಯ ಅಂಗವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧೀ ತನ್ನ ಸಿದ್ಧಾಂತಗಳ ಮಹತ್ವದ ಬಗ್ಗೆ ವಿಶ್ಲೇಷಿಸಿ ಪ್ರಬಂಧವನ್ನು ಬರೆಯಲು ಅನುವಾಗುವಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ (Highschool students) ಜಿಲ್ಲಾ ಮತ್ತು ರಾಜ್ಯ ಮಟ್ಟದ ಪುಬಂಧ ಸ್ಪರ್ಧೆಯನ್ನು (Essay Competition) ಆಯೋಜಿಸುತ್ತಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಬಂಧಗಳನ್ನು ಬರೆದು ಅ.31 ರೊಳಗಾಗಿ Email: kstaessay.kannada@gmail.com ಮತ್ತು kstaessay.english@gmail.com ವಿಳಾಸಕ್ಕೆ ಕಳುಹಿಸಿಕೊಡಬಹುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ನವೆಂಬರ್ ೧೨ರಂದು ಅಕಾಡೆಮಿಯಲ್ಲಿ ಆಯೋಜಿಸಲಾಗುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಸ್ಥಳದಲ್ಲೇ ಪ್ರಬಂಧವನ್ನು ಕನ್ನಡ (Kannada) ಮತ್ತು ಆಂಗ್ಲ (English) ಭಾಷೆಯಲ್ಲಿ ಪ್ರತ್ಯೇಕವಾಗಿ ಬರೆಯಬೇಕಾಗಿರುತ್ತದೆ.

ಇದನ್ನೂ ಓದಿ : ಭಟ್ಕಳದಿಂದ ಕರ್ನಾಟಕ ಸಂಭ್ರಮ ೫೦ರ ಜ್ಯೋತಿ ರಥಯಾತ್ರೆ ಆರಂಭ

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ (Essay Competition) ವಿಜೇತರಿಗೆ ಪ್ರಥಮ ಬಹುಮಾನ ರೂ.೨೫೦೦೦, ದ್ವಿತೀಯ ಬಹುಮಾನ ರೂ. ೧೫೦೦೦, ತೃತೀಯ ಬಹುಮಾನ ರೂ.೧೦೦೦೦ ನೀಡಲಾಗುವುದು. ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ಬಹುಮಾನ ರೂ.೩೦೦೦, ದ್ವಿತೀಯ ಬಹುಮಾನ ರೂ.೨೦೦೦, ತೃತೀಯ ಬಹುಮಾನ ರೂ.೧೦೦೦ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಚಂದ್ರಶೇಖರಮೂರ್ತಿ ಎಸ್. ಮೊ. ಸಂ: 9686449019, 9686919019, ದೂ. 080-29721550ನ್ನು ಅಥವಾ ಅಕಾಡೆಮಿಯ ವೆಬ್ ಸೈಟ್ www.kstacademy.in ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ : ಅ.೨೦ರಂದು ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ ಶಿಪ್