ಸೊರಬ(Soraba): ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಭೈರೆಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಗ್ರಾಮದ ಮಿಥುನ ಗೌಡ (21) ಮೃತ ಯುವಕ. ಶುಕ್ರವಾರ ಬೆಳಿಗ್ಗೆ ಸಾಕಿದ ಜಾನುವಾರುಗಳನ್ನು ಮೈತೊಳೆಯಲು ಹೋದಾಗ ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆ ಹಚ್ಚಿ ಮೇಲೆತ್ತಿದ್ದಾರೆ. ಸೊರಬ (soraba) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಗೋ ಅಪಹರಣ ತಡೆಗಟ್ಟಲು ಸಾರ್ವಜನಿಕರ ಆಗ್ರಹ