ಕಾರವಾರ (Karwar): ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kannada) ನವೆಂಬರ್ ೧ರಂದು ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ನಿರ್ದೇಶನ ನೀಡಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕನ್ನಡ ರಾಜ್ಯೋತ್ಸವ (Kannada Rajyotsava) ಪ್ರಯುಕ್ತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಮತ್ತು ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಅಧಿಕಾರಿಗಳ ನೇತೃತ್ವದ ಉಪ ಸಮಿತಿಗಳನ್ನು ರಚಿಸಿದ ಅವರು, ಎಲ್ಲಾ ಉಪ ಸಮಿತಿಗಳು ತಮಗೆ ನೀಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ, ವೇದಿಕೆ, ಪಥಸಂಚಲನ, ಸಾಂಸ್ಕೃತಿಕ, ಬಹುಮಾನ ವಿತರಣೆ ಕುರಿತ ವಿವಿಧ ಉಪ ಸಮಿತಿಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.
ಇದನ್ನೂ ಓದಿ : ಪಥ ಸಂಚಲನ ನೋಡೋದನ್ನ ತಪ್ಪಿಸಿಕೊಳ್ಳಬೇಡಿ; ಯಾಕೆ ಗೊತ್ತಾ?
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು
ವಿವಿಧ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ಏರ್ಪಡಿಸಬೇಕು. ಮೆರವಣಿಗೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಅರಣ್ಯ, ಮೀನುಗಾರಿಗೆ, ಬಂದರು ಇಲಾಖೆ ಮತ್ತು ನಗರಸಭೆ ವತಿಯಿಂದ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಇದನ್ನೂ ಓದಿ : ಸುಪ್ರೀಂ ಕೋರ್ಟನಲ್ಲಿ ಸರ್ಕಾರ ನಿಲುವು ಪ್ರಕಟಿಸಲಿ
ಕಾರವಾರದ ಪೊಲೀಸ್ ಕವಾಯತು ಮೈದಾನದಲ್ಲಿ ಧ್ವಜಾರೋಹಣ ಮತ್ತು ಪಥ ಸಂಚಲನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಮೆರವಣಿಗೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್, ಎನ್.ಸಿ.ಸಿ, ಗೃಹ ರಕ್ಷಕ ದಳ ಸೇರಿದಂತೆ ಎಲ್ಲರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯ್ಕ
ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಅರಣ್ಯ ಜಾಗ ಅತಿಕ್ರಮಣಕ್ಕೆ ಗ್ರಾಮಸ್ಥರ ವಿರೋಧ