ಬೆಂಗಳೂರು (Bengaluru) : ಎಲ್ಲ ಪಕ್ಷದಲ್ಲಿಯೂ ಈ ವಿದ್ಯಮಾನ ನಡೆಯುತ್ತದೆ (Politics). ಮಾಜಿ ಶಾಸಕ ಸಿ.ಪಿ.ಯೋಗೇಶ್ವರ (CP Yogeshwar) ಅವರನ್ನು ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ (DK Shivakumar) ಹೇಳಿದ ಮಾತಿದು. ಡಿ.ಕೆ.ಸುರೇಶ (DK Suresh) ಅವರನ್ನು ಸೋಲಿಸಿದವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದೀರಿ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ……
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
“ಇದರ ಬಗ್ಗೆ ನಮ್ಮ ಕಾರ್ಯಕರ್ತರ ಬಳಿ ಚರ್ಚೆ ನಡೆಸಿದ್ದೇವೆ. ಇದು ಎಲ್ಲಾ ಪಕ್ಷದಲ್ಲಿಯೂ ಇದ್ದಿದ್ದೇ. ನಮ್ಮಲ್ಲಿ ಮಾತ್ರ ಇದು ನಡೆದಿಲ್ಲ. ಇದೊಂದು ರಾಜಕೀಯ ವಿದ್ಯಮಾನವಷ್ಟೇ (Politics)” ಎಂದರು. ಅಭ್ಯರ್ಥಿ ಕೊರತೆಯಿಂದ ಯೋಗೇಶ್ವರ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತೇ ಎಂದು ಕೇಳಿದಾಗ, “ಕಾಂಗ್ರೆಸ್ (Congress) ಪಕ್ಷಕ್ಕೆ ಎಂದಿಗೂ ಅಭ್ಯರ್ಥಿಗಳ ಕೊರತೆ ಕಾಣುವುದಿಲ್ಲ. ನಾನು ಇಲ್ಲದಿದ್ದರೂ ಪಕ್ಷ ನಡೆಯುತ್ತದೆ” ಎಂದರು.
ವಿಡಿಯೋ ಸಹಿತ ಇದನ್ನೂ ಓದಿ : DK Shivakumar/ ನಾಳೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರ ಬಿಟ್ಟುಕೊಡಲು ಕುಮಾರಸ್ವಾಮಿ (HD Kumaraswamy) ಅವರು ಮುಂದಾಗಿದ್ದರು ಎಂಬ ಬಗ್ಗೆ ಕೇಳಿದಾಗ, “ತಮ್ಮ ಸ್ವಂತ ಕ್ಷೇತ್ರವನ್ನೇ ಬಿಜೆಪಿಗೆ (BJP) ಬಿಟ್ಟುಕೊಡಲು ಕುಮಾರಸ್ವಾಮಿ ಸಿದ್ದರಾಗಿದ್ದರು. ಎರಡು ಬಾರಿ ಸಿಎಂ, ಪ್ರಸ್ತುತ ಕೇಂದ್ರ ಸಚಿವರಾಗಿರುವ ಅವರು ಎಷ್ಟು ದುರ್ಬಲರಾಗಿದ್ದಾರೆ ಎಂಬುದು ಇದರಿಂದ ತಿಳಿಯುತ್ತದೆ. ಅವರು ಚನ್ನಪಟ್ಟಣವನ್ನು (Channapattana) ಗೆಲ್ಲುತ್ತೇವೆ ಎಂದು ಹೇಳಲು ಸಾಧ್ಯವೇ” ಎಂದರು.
ಇದನ್ನೂ ಓದಿ : ಖರೀದಿ ಮೇಲೆ ಲಕ್ಕಿ ಡ್ರಾ ಕೂಪನ್; ದಾಖಲಾಯ್ತು ದೂರು