ಭಟ್ಕಳ (Bhatkal) : ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾದ ಅರಣ್ಯವಾಸಿಗಳನ್ನ (forest dwellers) ಒಕ್ಕಲೆಬ್ಬಿಸಬೇಕು ಎಂದು ಪರಿಸರವಾದಿ ಸಂಘಟನೆಗಳು ಸುಪ್ರೀಂ ಕೋರ್ಟಿನಲ್ಲಿ (Supreme Court) ದಾಖಲಿಸಿದ ಪ್ರಕರಣದಲ್ಲಿ ಅರಣ್ಯವಾಸಿಗಳ ಪರ ವಾದ ಮಂಡಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ (Ravindra naik) ಹೇಳಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಅವರು ಭಟ್ಕಳದಲ್ಲಿ ಜರುಗಿದ ಅರಣ್ಯವಾಸಿಗಳ ಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಸುಪ್ರೀಂ ಕೋರ್ಟಿನಲ್ಲಿ (Supreme Court) ಹೋರಾಟ ಮಾಡುವ ಭರವಸೆ ನೀಡಿದರು. ಅರಣ್ಯವಾಸಿಗಳಿಗೆ ಅರಣ್ಯ ಸಾಗುವಳಿ ಹಕ್ಕಿಗೆ ಸಂಬಂಧಿಸಿ ಅರಣ್ಯ ಹಕ್ಕು ಕಾಯಿದೆ ಕೊನೆಯ ಕಾನೂನಾಗಿದೆ. ಅರಣ್ಯವಾಸಿಗಳಿಗೆ ಅರಣ್ಯ ಭೂಮಿ ಹಕ್ಕಿನಿಂದ ವಂಚಿತರಾಗದಂತೆ ಕಾಯಿದೆಯು ಕಾನೂನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಅರಣ್ಯವಾಸಿಗಳು ಆತಂಕವಾಗುವ ಅಗತ್ಯವಿಲ್ಲವೆಂದು ಅವರ ಹೇಳಿದರು.
ಇದನ್ನೂ ಓದಿ : ಸರ್ದಾರ ವಲ್ಲಭಭಾಯಿ ಪಟೇಲರ ಜನ್ಮದಿನ ಆಚರಣೆ
ಅರಣ್ಯ ಹಕ್ಕು ಕಾಯಿದೆಯ ಅನುಷ್ಠಾನವಾಗುತ್ತಿರುವ ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ ೬೯,೭೩೩ ಅರ್ಜಿಗಳು ಕಾನೂನಿಗೆ ವ್ಯತಿರಿಕ್ತವಾಗಿ ತಿರಸ್ಕೃತವಾಗಿರುವುದು ವಿಷಾದಕರ ಎಂದು ರವೀಂದ್ರ ನಾಯ್ಕ (Ravindra naik) ಹೇಳಿದರು. ಜಿಲ್ಲಾ ಸಂಚಾಲಕ ದೇವರಾಜ ಗೊಂಡ, ಪಾಂಡುರಂಗ ನಾಯ್ಕ ಬೆಳ್ಕೆ, ತಾಲೂಕು ಸಂಚಾಲಕ ಚಂದ್ರು ನಾಯ್ಕ ಬೆಳ್ಕೆ, ಮೂದು ಮಳ್ಳ ನಾಯ್ಕ, ರತ್ನಾ ನಾಯ್ಕ, ಗಣಪತಿ ನಾರಾಯಣ ನಾಯ್ಕ ಹಾಡುವಳ್ಳಿ, ರಕ್ಷಿತ ಎಂ ಗೊಂಡ ಉಪಸ್ಥಿತರಿದ್ದರು.
ಇದನ್ನೂ ಓದಿ : Appu/ ೧೨ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ