ಭಟ್ಕಳ (Bhatkal): ಜಾಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಖಾಜಿಯಾ ಅಪ್ಸ್ ಹುಜೇಫಾ ಶ್ರೀ ಭುವನೇಶ್ವರಿ (Bhuvaneswari) ದೇವಿಗೆ ಪುಷ್ಪನಮನ ಸಲ್ಲಿಸಲು ನಿರಾಕರಿಸಿ ಅಗೌರವ ತೋರಿಸಿದ್ದನ್ನು ಖಂಡಿಸಿ ಆಸರಕೇರಿಯ ಶ್ರೀ ಭುವನೇಶ್ವರಿ ಕನ್ನಡ ಸಂಘ ಪ್ರತಿಭಟನೆ (protest) ನಡೆಸಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಜಾಲಿ ಪಪಂ ಅಧ್ಯಕ್ಷರು ಕ್ಷಮೆ ಕೇಳಬೇಕು. ಅವರನ್ನು
ನಾಡದ್ರೋಹಿ ಎಂದು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಶ್ರೀ ಭುವನೇಶ್ವರಿ ಕನ್ನಡ ಸಂಘ ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿ, ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ.
ಇದನ್ನೂ ಓದಿ : ನೇಣು ಬಿಗಿದುಕೊಂಡ ಕ್ಯಾನ್ಸರ್ ರೋಗಿ
ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿಯ ಅಗೌರವ ತೋರುವ ಜನಪ್ರತಿನಿಧಿಗಳಿಗೆ ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲಿ ಆಹ್ವಾನಿಸಬಾರದು. ಒಂದೊಮ್ಮೆ ಅಂತಹವರನ್ನು ಆಹ್ವಾನಿಸಿದರೆ ಕನ್ನಡ (Kannada) ಪರ ಸಂಘಟನೆಗಳಿಂದ ಮುಂದಿನ ದಿನಗಳಲ್ಲಿ ಮುತ್ತಿಗೆ ಹಾಕಲಾಗುವುದು. ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಕರ್ನಾಟಕ (Karnataka) ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಸಂಘ ನೀಡಿದೆ.
ಇದನ್ನೂ ಓದಿ : ಭಟ್ಕಳಕ್ಕೆ ಜಾನಪದ ಅಕಾಡೆಮಿ ಪ್ರಶಸ್ತಿ ಗರಿ
ಸಂಘದ ಅಧ್ಯಕ್ಷ ಅಣ್ಣಪ್ಪ ನಾಯ್ಕ ಮಾತನಾಡಿ, ಕೇವಲ ತಮ್ಮ ಧರ್ಮವನ್ನು ಪ್ರೀತಿಸುವವರು ಯಾಕೆ ಜನಪ್ರತಿನಿಧಿಯಾಗಬೇಕು? ಅಷ್ಟೊಂದು ಧರ್ಮಾಭಿಮಾನ ಇದ್ದವರು ಮನೆಯಲ್ಲೇ ಕುಳಿತುಕೊಳ್ಳಬೇಕು. ಕೂಡಲೇ ಅವರು ತಮ್ಮ ಅಧ್ಯಕ್ಷ ಪದವಿಗೆ ರಾಜೀನಾಮೆ ಕೊಡಲೇಬೇಕು. ಜೊತೆಗೆ ಪಟ್ಟಣ ಪಂಚಾಯತ ಕಚೇರಿಯಲ್ಲಿ ನಮ್ಮ ಸಮ್ಮುಖದಲ್ಲಿ ನಾಡ ದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಜಾಲಿ ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ವಿಡಿಯೋ ಸಹಿತ ಇದನ್ನೂ ಓದಿ : ವಕ್ಫ್ ಬೋರ್ಡ್ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
ತಾಲೂಕು ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ವೆಂಕಟೇಶ ನಾಯ್ಕ ಮಾತನಾಡಿ ‘ ಕನ್ನಡಕ್ಕೆ ಗೌರವ ತೋರಿಸಲು ಸಾಧ್ಯವಿಲ್ಲ ಎಂದಾದರೆ ಜನಪ್ರತಿನಿಧಿಯಾಗಲು ಅರ್ಹರಲ್ಲ. ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ರೀತಿ ವರ್ತನೆ ಮಾಡಿದ್ದಾರೆ ಎಂದಾದರೆ ಸಹಾಯಕ ಆಯುಕ್ತರು ಸಹ ಅಗೌರವ ತೋರಿದಂತೆ ಆಗಿದೆ ಎಂದರು.
ಇದನ್ನೂ ಓದಿ : ಭುವನೇಶ್ವರಿಗೆ ಅಗೌರವ; ಕಸಾಪ ಖಂಡನೆ
ಭಟ್ಕಳ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ ಮಾತನಾಡಿ, ಅವರನ್ನು ವೇದಿಕೆಯಲ್ಲಿ ಇರಿಸಿಕೊಂಡಿದ್ದು ಮತ್ತು ಅವರ ಮೇಲೆ ಸುಮೋಟೋ ಪ್ರಕರಣ ಅಥವಾ ಅವರ ಮೇಲೆ ಸೂಕ್ತ ಕ್ರಮ ಜರುಗಿಸದೇ ಇರುವುದಕ್ಕೆ ಸಹಾಯಕ ಆಯುಕ್ತರು ಮತ್ತು ತಹಸೀಲ್ದಾರರೇ ನೇರ ಹೊಣೆ. ನಿಮ್ಮ ಬೇಜವಾಬ್ದಾರಿತನಕ್ಕೆ ನಿಮ್ಮ ವಿರುದ್ದವೂ ಸಹ ನಾವು ನ್ಯಾಯಾಲಯದಲ್ಲಿ ದೂರು ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ !
ಈ ಸಂದರ್ಭದಲ್ಲಿ ಶ್ರೀ ಭುವನೇಶ್ವರಿ ಕನ್ನಡ ಸಂಘದ ಉಪಾಧ್ಯಕ್ಷ ಶ್ರೀಧರ ನಾಯ್ಕ ಪೈಕಿಮನೆ, ಪ್ರಧಾನ ಕಾರ್ಯದರ್ಶಿ ಈಶ್ವರ ನಾಯ್ಕ, ಗೌರವಾಧ್ಯಕ್ಷ ರಮೇಶ ನಾಯ್ಕ, ಸದಸ್ಯರಾದ ಶ್ರೀಧರ ನಾಯ್ಕ ಕೊಲ್ಲೆಮನೆ, ಪ್ರಕಾಶ ನಾಯ್ಕ, ಆಟೋ ರಿಕ್ಷಾ ಚಾಲಕರ ಸಂಘದ ಉಪಾಧ್ಯಕ್ಷ ಶ್ರೀನಿವಾಸ ನಾಯ್ಕ ಹನುಮಾನನಗರ ಮುಂತಾದವರು ಇದ್ದರು.
ಇದನ್ನೂ ಓದಿ : ಬಡವರ ಚಿಕಿತ್ಸೆಗೆ ಯಂಗ್ ಒನ್ ಇಂಡಿಯಾ ಸ್ಪಂದನೆ