ಧಾರವಾಡ (Dharwad): ಬೆಳಗಾವಿ (Belagavi), ಧಾರವಾಡ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ (Lokayukta Raid) ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬೆಳಗಾವಿ ಜಿಲ್ಲೆ ನಿಪ್ಪಾಣಿ (nippani) ತಾಲ್ಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠಲ್ ಡವಳೇಶ್ವರ ಮನೆ ಮೇಲೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಧಾರವಾಡದಲ್ಲಿ ಕೆಐಎಡಿಬಿ (KIADB) ಎಇಇ ಗೋವಿಂದ ಭಜಂತ್ರಿ ಮನೆ ಮೇಳೆ ದಾಳಿಯಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಕಮಲ ರಾಜ್ ಮನೆ ಮೇಲೂ ದಾಳಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಉತ್ತರ ಕನ್ನಡ ಸಹಿತ ಹಲವೆಡೆ ಭಾರೀ ಮಳೆ ಎಚ್ಚರಿಕೆ
ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣದಲ್ಲಿ (Srirangapattana) ಇರುವ ಮೈಸೂರು (Mysuru) ಪಾಲಿಕೆ ವಲಯ ಆಯುಕ್ತ ನಾಗೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಮಂಡ್ಯ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟಿ ಅವರ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ : ಬಂದೂಕಿನಿಂದ ಗುಂಡು ಹಾರಿ ಸಿಐಎಸ್‌ಎಫ್ ಸಿಬ್ಬಂದಿ ಸಾವು