ಕಾರವಾರ (Karwar) : ಪ್ರಸಕ್ತ ಸಾಲಿನ ಮುಂಗಾರು (Monsoon) ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಲ್ಲಿ ಉತ್ತರ ಕನ್ನಡ (Uttarakannada) ಜಿಲ್ಲೆಯ ರೈತರಿಂದ ಭತ್ತ (paddy) ಖರೀದಿಗಾಗಿ ನೊಂದಣಿ ಕೇಂದ್ರಗಳನ್ನು (registration center) ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರವು ಪ್ರಸಕ್ತ ಸಾಲಿಗೆ ಕನಿಷ್ಠ ಬೆಂಬಲ ಬೆಲ ಯೋಜನೆಯಡಿ ಸಾಮಾನ್ಯ ಭತ್ತಕ್ಕೆ (paddy) ಕ್ವಿಂಟಾಲ್ ರೂ.೨೩೦೦ ಮತ್ತು ಗ್ರೇಡ್ ಎ ಭತ್ತಕ್ಕೆ ರೂ.೨೩೨೦ ಗಳನ್ನು ನಿಗಧಿಪಡಿಸಿದೆ. ಈ ಕುರಿತಂತೆ ಜಿಲ್ಲೆಯ ರೈತರಿಂದ ಭತ್ತ ಖರೀದಿಸಲು ಅನುಕೂಲವಾಗುವಂತೆ ಹಳಿಯಾಳ (Haliyal), ಶಿರಸಿ (Sirsi), ಮುಂಡಗೋಡು (Mundgod), ಜೋಯಿಡಾ (Joida), ಕುಮಟಾ (Kumta), ಅಂಕೋಲಾ (Ankola) ಮತ್ತು ಭಟ್ಕಳದಲ್ಲಿ (Bhatkal) ನೊಂದಣಿ ಕೇಂದ್ರಗಳನ್ನು ತೆರೆಯಲು ಸೂಚಿಸಿದ್ದಾರೆ. ಅಲ್ಲದೆ ನ.೧೫ರಿಂದ ರೈತರ ನೊಂದಣಿಯನ್ನು ಆರಂಭಿಸುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ : High Court / ಪ್ರಾಂಶುಪಾಲರಾಗಿ ಮರುನೇಮಕಕ್ಕೆ ಆದೇಶ
ಭತ್ತ ಖರೀದಿಗೆ ಸಂಬಂಧಿಸಿದಂತೆ ಸರ್ಕಾರದಿಂದ ನೇಮಕಗೊಂಡ ಸಂಗ್ರಹಣಾ ಏಜೆನ್ಸಿಗಳು ಸರ್ಕಾರ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಭತ್ತ ಖರೀದಿ ಹಂತದಲ್ಲಿ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಬೇಕು. ಪ್ರತೀ ಖರೀದಿ ಕೇಂದ್ರದಲ್ಲಿ ಕೃಷಿ
ಇಲಾಖೆಯ ವತಿಯಿಂದ ಗ್ರೇಡರ್ಗಳನ್ನು ನೇಮಿಸಿಕೊಳ್ಳಬೇಕು ಎಂದರು.
ಇದನ್ನೂ ಓದಿ : ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಸಾವು
ಪ್ರತೀ ಖರೀದಿ ಕೇಂದ್ರಗಳಿಗೆ ಖರೀದಿ ಅಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ರೈತರಿಂದ ಖರೀದಿಸಿದ ಭತ್ತ ಸಂಗ್ರಹಣೆಗೆ ಗೋದಾಮುಗಳ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಮತ್ತು ಖರೀದಿ ಕೇಂದ್ರಗಳಿಗೆ ಆಗಮಿಸುವ ರೈತರಿಗೆ ಕುಡಿಯುವ
ನೀರು ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಲಭ್ಯ ಒದಗಿಸುವಂತೆ ಸೂಚಿಸಿದರು.
ಇದನ್ನೂ ಓದಿ : ಹೊಸ ಆಟೋಗೆ ಪರ್ಮಿಟ್ ನೀಡದಂತೆ ಮನವಿ
ಭತ್ತವನ್ನು ಸರಬರಾಜು ಮಾಡಿದ ರೈತರಿಗೆ ೧೫ ದಿನಗಳ ಒಳಗೆ ಅವರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಬೇಕು. ಜಿಲ್ಲೆಯಲ್ಲಿ ಸಂಗ್ರಹವಾದ ಭತ್ತವನ್ನು ಹಲ್ಲಿಂಗ್ ಮಾಡುವ ಕುರಿತಂತೆ ಅಕ್ಕಿ ಗಿರಣಿಗಳನ್ನು ನೊಂದಾವಣೆ ಮಾಡಲು
ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಇದನ್ನೂ ಓದಿ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ
ಭತ್ತಕ್ಕೆ ನಿಗದಿಪಡಿಸಿರುವ ಕನಿಷ್ಠ ಬೆಂಬಲ ಬೆಲೆ, ಭತ್ತ ಖರೀದಿಗಾಗಿ ರೈತರಿಗಾಗಿ ಜಿಲ್ಲೆಯಲ್ಲಿ ತೆರೆಯಲಾಗುವ ನೊಂದಣಿ ಕೇಂದ್ರಗಳು ಮತ್ತು ಖರೀದಿ ಕೇಂದ್ರಗಳ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಅಗತ್ಯ ಮಾಹಿತಿಯನ್ನು ತಲುಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ, ಕೃಷಿ (agriculture) ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಗಿರಣಿ ಮಾಲೀಕರು ಉಪಸ್ಥಿತರಿದ್ದರು.
ಇದನ್ನೂ ಓದಿ : ಉತ್ತರ ಕನ್ನಡ ಸಹಿತ ಹಲವೆಡೆ ಭಾರೀ ಮಳೆ ಎಚ್ಚರಿಕೆ