ದಾಂಡೇಲಿ (Dandeli): ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬಾವಿವೊಂದರಲ್ಲಿ ವ್ಯಕ್ತಿಯ ಶವವೊಂದು ತೇಲುತ್ತಿರುವುದು ಪತ್ತೆಯಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಜೋಯಿಡಾ (Joida) ತಾಲೂಕಿನ ವಿರ್ನೋಲಿ ಗ್ರಾಮದ ಸದಾನಂದ ಮೋಹನ ಧರಣಿ (೩೫) ಎಂಬುವವರ ಶವ ಎಂದು ಗುರುತಿಸಲಾಗಿದೆ. ಈ ಕುರಿತು ಮೃತರ ತಾಯಿ ಶಾಂತಿ ದಾಂಡೇಲಿ (Dandeli) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು (complaint) ದಾಖಲಿಸಿದ್ದಾರೆ. ಕೂಲಿ ಕೆಲಸ ಮಾಡುವ ಈವರು ಅತಿಯಾದ ಸಾರಾಯಿ ಕುಡಿಯುವ ಚಟ ಹೊಂದಿದ್ದರು. ಇತ್ತೀಚಿನ ದಿನಗಳಲ್ಲಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದರು.
ಇದನ್ನೂ ಓದಿ : ಅಂತಿಮ ಪಂದ್ಯದಲ್ಲಿ ಎಸ್.ಎಸ್.ಎಸ್. ಸ್ಪೋರ್ಟ್ಸ್ಗೆ ಸೋಲು
ನ.೯ರ ಮಧ್ಯಾಹ್ನ ೧೨.೩೦ರಿಂದ ನಾಪತ್ತೆಯಾಗಿದ್ದ ಇವರು, ನ.೧೨ರಂದು ಮಧ್ಯಾಹ್ನ ೨ ಗಂಟೆ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆ. ವಿರ್ನೋಲಿ ಗ್ರಾಮದ ರಾಮಾ ಸದಾನಂದ ಧರಣಿ ಎಂಬುವವರ ಜಮೀನಿನಲ್ಲಿರುವ ಬಾವಿಯಲ್ಲಿ ಶವ ಪತ್ತೆಯಾಗಿದೆ. ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಯಲ್ಲಿ ಬಿದ್ದು ಮೃತಪಟ್ಟಿರುವುದಾಗಿ ತಾಯಿ ಶಾಂತಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ (case registered) ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
ಇದನ್ನೂ ಓದಿ : ಜಾಮೀನು ಸಿಕ್ಕ ಖುಷಿಯಲ್ಲಿ ಕಾಂಗ್ರೆಸ್ ಶಾಸಕ ಸತೀಶ ಸೈಲ್