ಭಟ್ಕಳ (Bhatkal) : ತಾಲೂಕಿನ ಬೆಂಗ್ರೆಯ ಆರ್.ಎನ್.ಎಸ್. ಗಾಲ್ಫ್ ರೆಸಾರ್ಟ್ (RNS Golf Resort) ಆವರಣದಲ್ಲಿ ನಡೆಯುತ್ತಿರುವ ಮತ್ಸ್ಯಮೇಳಕ್ಕೆ (Fish festival) ಭಟ್ಕಳ ಬಿಜೆಪಿ (BJP) ಘಟಕ ವಿರೋಧ ವ್ಯಕ್ತಪಡಿಸಿದೆ. ಮರಳು ಅಭಾವದಿಂದ ತಾಲೂಕಿನಲ್ಲಿ ವ್ಯವಹಾರ ಕುಂಠಿತಗೊಂಡಿರುವ ಸಂದರ್ಭದಲ್ಲಿ ಕೋಟಿಗಟ್ಟಲೆ ಖರ್ಚು ಮಾಡಬೇಕಾದ ಅಗತ್ಯವಿತ್ತೇ? ಎಂದು ಬಿಜೆಪಿ ಪ್ರಶ್ನಿಸಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈ ಕುರಿತು ಭಟ್ಕಳ ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಮತ್ತು ಮಾಜಿ ಅಧ್ಯಕ್ಷ ರಾಜೇಶ ನಾಯ್ಕ ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ. ಭಟ್ಕಳ ತಾಲೂಕಿನ ಬೆಂಗ್ರೆಯ ಆರ್ ಎನ್.ಎಸ್ ಗಾಲ್ಫ್ ಕ್ಲಬ್ ಮೈದಾನದಲ್ಲಿ ರಾಜ್ಯ ಮಟ್ಟದ ಮತ್ಸ್ತ ಮೇಳ (Fish Festival) ನಡೆಸುತ್ತಿರುವುದು ಒಳ್ಳೆಯ ವಿಚಾರ. ಆದರೆ ತಾಲೂಕಿನಲ್ಲಿ ಮರಳಿನ ಅಭಾವದಿಂದಾಗಿ ಸಾವಿರಾರು ಕಾರ್ಮಿಕರು, ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಕೊಂಡಿರುವ ನೂರಾರು ವ್ಯಾಪಾರ ವಹಿವಾಟುಗಳು ತೊಂದರೆಗೆ ಸಿಕ್ಕಿರುವ ಈ ಸಂದರ್ಭದಲ್ಲಿ ಕೋಟಿಗಟ್ಟಲೆ ಹಣವನ್ನು ವೆಚ್ಚ ಮಾಡಿ ಈ ರೀತಿಯ ಮತ್ಸ್ಯ ಮೇಳವನ್ನು ನಡೆಸುತ್ತಿರುವುದು ಸರ್ಕಾರದ ಜನ ವಿರೋಧಿ ನೀತಿಗೆ ಸ್ಪಷ್ಟ ಉದಾಹರಣೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಭಟ್ಕಳದಲ್ಲಿ ಅಂಬುಲೆನ್ಸ್ಗೆ ಡಿಕ್ಕಿ ಹೊಡೆದ ಬೊಲೆರೊ
ಜನರು ಸಂಕಷ್ಟದಲ್ಲಿ ಇರುವ ಈ ಸಮಯದಲ್ಲಿ ಜನರ ಕಷ್ಟಗಳಿಗೆ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ವಿನಿಯೋಗಿಸದೆ ಇಷ್ಟು ವರ್ಷ ಸರಳವಾಗಿ ನಡೆಸುತ್ತಿದ್ದ ಈ ಕಾರ್ಯಕ್ರಮವನ್ನು ಮೀನುಗಾರಿಕಾ ಸಚಿವರು (Fisheries Minister) ತಮ್ಮ ಪ್ರತಿಷ್ಠೆ ಮೆರೆಸಲು ಸರ್ಕಾರದ ಕೊಟ್ಯಂತರ ಹಣವನ್ನು ಖರ್ಚು ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಿಂದ ಮೀನುಗಾರಿಕೆ ನಡೆಸುವವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ. ಮೀನುಗಾರರ ಬಗ್ಗೆ ಸಚಿವ ಮಂಕಾಳ ವೈದ್ಯರಿಗೆ (Mankal Vaidya) ನಿಜವಾದ ಕಾಳಜಿ ಇದ್ದರೆ ಅವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಸಬ್ಸಿಡಿ ಇತ್ಯಾದಿಗಳನ್ನು ಒದಗಿಸಿ ಅವರ ಜೀವನ ಮಟ್ಟವನ್ನು ಹೆಚ್ಚಿಸುವಂತ ಕೆಲಸ ಮಾಡಲಿ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಭಟ್ಕಳದಲ್ಲಿ ಕ್ಲಿನಿಕ್ ಗಳ ಮೇಲೆ ದಾಳಿ
ಇದೇ ಮತ್ಸ್ಯ ಮೇಳಕ್ಕೆ ವೆಚ್ಷ ಮಾಡುವ ಹಣದಲ್ಲಿ ಸಾವಿರಾರು ಬಡ ಮೀನುಗಾರರ ಸಾಲ ಮನ್ನಾ ಮಾಡಬಹುದಿತ್ತು. ಒಂದು ಕಡೆ ಸರ್ಕಾರ ಬಡವರ ಬಿಪಿಎಲ್ ಕಾರ್ಡ ರದ್ದು ಪಡಿಸುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ತಾಲೂಕಿನ ಯಾವುದೇ ಕಚೇರಿಗಳಲ್ಲಿ ಜನಸಾಮಾನ್ಯರು ಕೆಲಸ ಮಾಡಿಸಿಕೊಳ್ಳುವುದೇ ದುಸ್ತರವಾಗಿದೆ. ಉಸ್ತುವಾರಿ ಸಚಿವರು ಜನರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡದೇ ತಮ್ಮ ವೈಯಕ್ತಿಕ ಹಿತಾಸಕ್ತಿಗೆ ಹೆಚ್ಚಿನ ಗಮನ ನೀಡುತ್ತಿರುವುದು ಖಂಡನೀಯ ಎಂದು ಅವರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಭಟ್ಕಳಿಗರ ಪದಕಗಳ ಬೇಟೆ