ಕಾರವಾರ (Karwar): ಉತ್ತರ ಕನ್ನಡ (Uttara Kannada) ಜಿಲ್ಲಾ ಪಂಚಾಯತ್ನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ (PDO of the Month) ಪ್ರಶಸ್ತಿಗೆ ನವೆಂಬರ್ ತಿಂಗಳಲ್ಲಿ ಶಿರಸಿ (Sirsi) ತಾಲೂಕಿನ ಇಟಗುಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಲಕ್ಷ್ಮೀ ಬಿ. ಭಾಜನರಾಗಿದ್ದಾರೆ. ಅವರಿಗೆ ಕಾರವಾರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಪ್ರಶಸ್ತಿ (PDO of the Month) ಸ್ವೀಕರಿಸಿ ಮಾತನಾಡಿದ ಜಯಲಕ್ಷ್ಮೀ ಬಿ. ಅವರು, ಗ್ರಾಮ ಮಟ್ಟದಲ್ಲಿ ಸಮಸ್ಯೆಗಳ ನಿವಾರಣೆ ಹಾಗೂ ಜನರ ಜೀವನ ಸುಧಾರಣೆಗಾಗಿ ನಿರಂತರ ಶ್ರಮಿಸುವ ಪಿಡಿಒ ಗಳ ಕಾರ್ಯವನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮೇಲಾಧಿಕಾರಿಗಳು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವುದು ಅತ್ಯಂತ ಖುಷಿಯ ಜೊತೆಗೆ ಪ್ರಶಂಸನೀಯ ಸಂಗತಿಯಾಗಿದೆ ಎಂದರು.
ಇದನ್ನೂ ಓದಿ : ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಚರ್ಚೆ
ಜಯಲಕ್ಷ್ಮೀ ಬಿ. ಅವರು ಬಿಇ ಪದವಿದರರು. ೨೦೧೮ರಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಪ್ರಾರಂಭಿಸಿದ್ದಾರೆ. ಈ ಹಿಂದೆ ಬದನಗೋಡ, ಸುಗಾವಿ ಗ್ರಾಮ ಪಂಚಾಯತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಇಟಗುಳಿ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪಂಚಾಯತ್ನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ, ಯೋಜನಾ ನಿರ್ದೇಶಕ ಕರೀಂ ಅಸಾದಿ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ ಮತ್ತು ಇತರರು ಉಪಸ್ಥಿತರಿದ್ದರು.