ಭಟ್ಕಳ (Bhatkal): ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ (House caught fire) ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾದ ಘಟನೆ ತಾಲೂಕಿನ‌ ಬೆಳ್ನಿ ಗ್ರಾಮದಲ್ಲಿ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಜ್ಯೋತಿ ಮೋಹನ ನಾಯ್ಕ ದಂಪತಿ ದೇವರಿಗೆ ದೀಪ ಹಚ್ಚಿ ಮಗನನ್ನು ಕರೆದುಕೊಂಡು ನಿನ್ನೆ ಶನಿವಾರ ಸಂಜೆ ಮಾರುಕಟ್ಟೆಗೆ ತೆರಳಿದ್ದರು. ಈ ಸಮಯದಲ್ಲಿ ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದೆ (House caught fire). ಬೆಂಕಿಯನ್ನು ನೋಡಿ ಅಕ್ಕಪಕ್ಕದ ಮನೆಯವರು ಮನೆ ಯಜಮಾನ ಮೋಹನ ನಾಯ್ಕರವರಿಗೆ ಮನೆಗೆ ಬೆಂಕಿ ಹೊತ್ತಿಕೊಂಡಿರುವ ವಿಷಯವನ್ನು ತಿಳಿಸಿದ್ದಾರೆ. ಅಲ್ಲಿಂದ ಮನೆಗೆ ಮರಳಿ  ಬಂದ ದಂಪತಿ, ಅಕ್ಕಪಕ್ಕದ ಮನೆಯವರು ಹಾಗೂ ಸ್ನೇಹಿತರೊಂದಿಗೆ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೊಳಗಾಗಲೇ ಮನೆಯಲ್ಲಿರುವ ಬಹುತೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿ ಅಪಾರ ನಷ್ಟ ಸಂಭವಿಸಿದೆ.

ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ವಿಡಿಯೋ ಸಹಿತ ಇದನ್ನೂ ಓದಿ : ಕೇರಳ, ಗೋವಾ ಬಿಟ್ಟು ಮುರ್ಡೇಶ್ವರಕ್ಕೆ ಮೋಜು-ಮಸ್ತಿಗೆ ಬರಲಿ