ಕಲಬುರಗಿ: ಕಲಬುರಗಿಯಲ್ಲಿ ಬಸ್‌ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಬೈಕ್‌ನಲ್ಲಿ ಬಂದ ಬಾಲಕರಿಬ್ಬರು ಸಿನಿಮೀಯ ರೀತಿಯಲ್ಲಿ ಬಸ್ ಅನ್ನು ಅಡ್ಡಗಟ್ಟಿ ಚಾಕುವಿನಿಂದ ದಾಳಿ ಮಾಡಿದ್ದಾರೆ.

ಇದನ್ನೂ ಓದಿ : ನಾಲ್ಕನೇ ಮಹಡಿಯಿಂದ ಬಿದ್ದು ಯುವತಿ ಸಾವು

ಕಲಬುರಗಿ ಜಿಲ್ಲೆಯ ಅಟ್ಟೂರು ಕ್ರಾಸ್ ಬಳಿ ಘಟನೆ ನಡೆದಿದೆ. ಬೆಳಮಗಿ ಗ್ರಾಮದಿಂದ ವಿಕೆ ಸಲಗರದ ಗ್ರಾಮಕ್ಕೆ ಅಪ್ರಾಪ್ತೆ ಬಸ್ ನಲ್ಲಿ ತೆರಳುವಾಗ ಈ ದಾಳಿ ಮಾಡಿದ್ದಾರೆ. ಅಪ್ರಾಪ್ತ ಬಾಲಕಿಯ ಕತ್ತು ಸೀಳಿರುವುದರಿಂದ ಆಕೆಯನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್‌ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಇದನ್ನೂ ಓದಿ : ಮನೋಹರ ಜೋಶಿ ನಿಧನ
ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಬಾಲಕಿ ಮೇಲೆ ದಾಳಿ ಮಾಡಿರುವುದು ಪೋಷಕರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಈ ವಿಡಿಯೋ ನೋಡಿ : ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ https://fb.watch/qnTs-9ReJ0/?mibextid=Nif5oz