ದಾಂಡೇಲಿ(Dandeli): ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳಿದ್ದ ಬಸ್ಸೊಂದು (school bus) ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಭಾನುವಾರ ನಡೆದಿದೆ.  ಗಣೇಶಗುಡಿಯಲ್ಲಿ ಜಲಕ್ರೀಡೆಯಲ್ಲಿ (Water sports) ತೊಡಗಿದ್ದ ತಂಡ ದಾಂಡೇಲಿಗೆ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಚಿತ್ರದುರ್ಗ (Chitradurga) ಜಿಲ್ಲೆಯ ಹೊಸದುರ್ಗದ (Hosadurga) ಸೇಂಟ್ ಅಂತೋನಿ ಪ್ರೌಢಶಾಲೆಯಿಂದ ೪೫ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ (school bus) ಚಾಲಕನ ನಿಯಂತ್ರಣ ತಪ್ಪಿದ ನಂತರ ರಸ್ತೆ ಬದಿಯ ಗಟಾರಕ್ಕೆ ಪಲ್ಟಿಯಾಗಿದೆ. ಸ್ಥಳೀಯರು ಮತ್ತು ಹತ್ತಿರದ ರೆಸಾರ್ಟ್ ಸಿಬ್ಬಂದಿ ತಕ್ಷಣ ರಕ್ಷಣೆಗೆ ಬಂದು ಬಸ್ಸಿನಿಂದ ಮಕ್ಕಳನ್ನು ಹೊರತೆಗೆದಿದ್ದಾರೆ. ಆಂಬ್ಯುಲೆನ್ಸ್ ಮೂಲಕ ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ಮಕ್ಕಳನ್ನು ಸಾಗಿಸಿದ್ದಾರೆ. ಗಾಯಾಳು ವಿದ್ಯಾರ್ಥಿಗಳು ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ರಾಮನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಹೆಂಡತಿ ಮನೆಗೆ ಹೋದ ಇಂಜಿನಿಯರ್‌ ಶಂಕಾಸ್ಪದ ಸಾವು