ಬೆಂಗಳೂರು (Bengaluru) : government holiday/ ಕರ್ನಾಟಕ (Karnataka) ರಾಜ್ಯದ ಮಾಜಿ ಮುಖ್ಯಮಂತ್ರಿ (Former CM) ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ (S M Krishna) ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳ ಡೈರಿ ಫೇಸ್‌ಬುಕ್‌ ಪೇಜ್‌ ಫಾಲೋವ್‌ ಮಾಡಲು ಇಲ್ಲಿ ಕ್ಲಿಕ್‌ ಮಾಡಿ.

ಮೃತರ ಅಂತ್ಯಕ್ರಿಯೆಯನ್ನು ಡಿ.೧೧ರಂದು ಬುಧವಾರದಂದು ಹುಟ್ಟೂರಾದ ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥ ಡಿ.೧೧ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆ ಘೋಷಿಸಲಾಗಿದೆ (Government Holiday).

ಇದನ್ನೂ ಓದಿ : ಹಿರಿಯ ಮುತ್ಸದ್ದಿ ರಾಜಕಾರಣಿ ಎಸ್‌ ಎಂ ಕೃಷ್ಣ ಇನ್ನಿಲ್ಲ

ಡಿ.೧೦ರಿಂದ ೧೨ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ :   ಓಸಿ ಆಡಿಸುತ್ತಿದ್ದ ಇಬ್ಬರು ಪೊಲೀಸ್‌ ವಶಕ್ಕೆ