ಭಟ್ಕಳ (Bhatkal): ಮುರ್ಡೇಶ್ವರದಲ್ಲಿ (Murdeshwar) ಅರಬ್ಬಿ ಸಮುದ್ರದಲ್ಲಿ (Arabian Sea) ಕೊಚ್ಚಿ ಹೋಗಿ ಮೃತಪಟ್ಟಿರುವ (Beach tragic) ನಾಲ್ವರು ವಿದ್ಯಾರ್ಥಿನಿಯರ ಕುಟುಂಬಕ್ಕೆ ಸರ್ಕಾರ ೫ ಲಕ್ಷ ರೂ. ಘೋಷಣೆ ಮಾಡಿದೆ. ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ೫ ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಡಿ.೧೦ರಂದು ಕೋಲಾರ (Kolar) ಜಿಲ್ಲೆಯ ಮುಳುಬಾಗಿಲು (Mulabagilu) ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕಾಗಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುರ್ಡೇಶ್ವರಕ್ಕೆ (Murudeshwar) ಬಂದಿದ್ದರು. ವಿದ್ಯಾರ್ಥಿಗಳು ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಒಬ್ಬ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಳು (Beach tragic). ಈ ವೇಳೆ ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿತ್ತು. ಇನ್ನೂ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case registered).
ಇದನ್ನೂ ಓದಿ : ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ
ಜಿಲ್ಲಾಡಳಿತದಿಂದ ಕಾಣೆಯಾದ ಮೂವರು ವಿದ್ಯಾರ್ಥಿನಿಯರ ಶೋಧ ಕಾರ್ಯಾಚರಣೆ ನಿರಂತರವಾಗಿ ಮುಂದುವರೆಸಿತ್ತು. ಕಾಣೆಯಾಗಿದ್ದ ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ಮುರ್ಡೇಶ್ವರ ದೇವಸ್ಥಾನದ ಹಿಂಬದಿಯ ಅರಬ್ಬಿ ಸಮುದ್ರದಲ್ಲಿ ಇಂದು ಡಿ.೧೧ರಂದು ಪತ್ತೆಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ, ಸುರಕ್ಷಾ ಕ್ರಮ ಕೈಗೊಳ್ಳದೆ ಮಕ್ಕಳನ್ನು ಸಮುದ್ರದಲ್ಲಿ ಆಡಲು ಬಿಟ್ಟ ಪ್ರಾಂಶುಪಾಲೆ ಶಶಿಕಲಾ ಸಹಿತ ನಾಲ್ವರು ಶಿಕ್ಷಕರು ಮತ್ತು ಇಬ್ಬರು ಶಿಕ್ಷಕಿಯರ ವಿರುದ್ಧ ಪ್ರಕರಣ (Complaint) ದಾಖಲಾಗಿದೆ. ಘಟನೆ ಹಿನ್ನೆಲೆ ಪ್ರಾಂಶುಪಾಲೆ ಶಶಿಕಲಾ, ಅತಿಥಿ ಶಿಕ್ಷಕರಾದ ಚೌಡಪ್ಪ, ನರೇಶ್, ಸುನೀಲ, ವಿಶ್ವನಾಥ, ಶಾರದಮ್ಮ, ಲಕ್ಷ್ಮಮ್ಮ ಅಮಾನತುಗೊಂಡಿದ್ದಾರೆ.
ಇದನ್ನೂಓದಿ : ಮುರ್ಡೇಶ್ವರದಲ್ಲಿ ಮೊಕ್ಕಾಂ ಹೂಡಿದ ಡಿಸಿ, ಎಸ್ಪಿ
ಮೃತ ನಾಲ್ವರೂ ವಿದ್ಯಾರ್ಥಿಗಳ ಶವದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಉಳಿದ ವಿದ್ಯಾರ್ಥಿಗಳನ್ನು ಸರ್ಕಾರಿ ಬಸ್ಸಿನಲ್ಲಿ ಮುರ್ಡೇಶ್ವರದಿಂದ ಕೋಲಾರದ ಮುಳಬಾಗಿಲಿಗೆ ಜಿಲ್ಲಾಡಳಿತ ಕಳುಹಿಸಿದೆ. ಮುರ್ಡೇಶ್ವರ ಬೀಚ್ನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪ್ರವಾಸಿಗರ ಸುರಕ್ಷತೆಯ ಹಿತದೃಷ್ಠಿಯಿಂದ ಮುರ್ಡೇಶ್ವರ ಬೀಚ್ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಇದನ್ನೂ ಓದಿ : ನೀರಲ್ಲಿ ಮುಳುಗಿ ಓರ್ವ ವಿದ್ಯಾರ್ಥಿನಿ ಸಾವು, ಮೂವರು ನಾಪತ್ತೆ