ಬೆಂಗಳೂರು (Bengaluru) : ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ ಬೆಂಗಳೂರಿನಲ್ಲಿ ಡಿಸೆಂಬರ್ ೧೮ ರಿಂದ ಎರಡು ದಿನಗಳ ಕಾಲ ಮತ್ತೆ ಭಾರೀ ಮಳೆಯಾಗಲಿದೆ. ಅದಕ್ಕೂ ಮೊದಲು ಭಾನುವಾರದಿಂದ ಮೂರು ದಿನಗಳ ಶುಷ್ಕ ಹವಾಮಾನಕ್ಕೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ (Chikkaballapura), ಕೋಲಾರ (Kolar), ಮಂಡ್ಯ (Mandya), ಮೈಸೂರು (Mysuru) ಮತ್ತು ತುಮಕೂರು (Tumkur) ಜಿಲ್ಲೆಗಳು ಸೇರಿದಂತೆ ಕರ್ನಾಟಕದ (Karnataka) ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ವಾತಾವರಣವು ರಾಜ್ಯದ ಹವಾಮಾನದ ಮೇಲೆ ಪ್ರಭಾವ ಬೀರುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ ೧೮ ಮತ್ತು ೧೯ ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋವ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ (Coastal) ಜಿಲ್ಲೆಗಳಾದ ದಕ್ಷಿಣ ಕನ್ನಡ(Dakshina Kannada), ಉತ್ತರ ಕನ್ನಡ (Uttara Kannada) ಮತ್ತು ಉಡುಪಿ (Udupi) ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.
ಇದನ್ನೂ ಓದಿ : Car Accident/ ಗಾಯಾಳು ಶಿಕ್ಷಕರು ಹೇಗಿದ್ದಾರೆ? ಅಪ್ಡೇಟ್ ಮಾಹಿತಿ ಇಲ್ಲಿದೆ….