ಭಟ್ಕಳ (Bhatkal) : ತಾಲೂಕಿನ ಮುರ್ಡೇಶ್ವರದಲ್ಲಿ (Murdeshwar) ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟಿರುವ ಪ್ರಕರಣ ವಿಧಾನಸಭೆಯಲ್ಲಿ (Assembly) ಪ್ರತಿಧ್ವನಿಸಿದೆ. ಬೆಳಗಾವಿಯ (Belagavi) ಸುವರ್ಣ ವಿಧಾನಸೌಧದಲ್ಲಿ (Suvarna Vidhanasoudha) ನಡೆಯುತ್ತಿರುವ ಅಧಿವೇಶನದ ವೇಳೆ ಶುಕ್ರವಾರ ಮುಳಬಾಗಿಲು (Mulabagilu) ಶಾಸಕ ಸಮೃದ್ಧಿ ಮಂಜುನಾಥ ಈ ವಿಷಯದ ಕುರಿತು ಸರ್ಕಾರದ ಗಮನಸೆಳೆದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳ ಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ಕೆಳಮನೆಯಲ್ಲಿ (Assembly) ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ, ಹೆಚ್ಚಿನ ಜನರು ಪ್ರವಾಸಕ್ಕೆ ಆಗಮಿಸುವ ಸ್ಥಳದಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು. ತಮ್ಮದೇ ಕ್ಷೇತ್ರದ ವಿದ್ಯಾರ್ಥಿನಿಯರ ದುರಂತ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿದರು. ಇದಕ್ಕುತ್ತರಿಸಿದ ಸಚಿವ ಕೃಷ್ಣ ಬೈರೇಗೌಡ (Krishna Byregowda) ಅವರು, ಪ್ರವಾಸದ ವೇಳೆ ಮಕ್ಕಳ ರಕ್ಷಣೆ ಶಿಕ್ಷಕರ ಜವಾಬ್ದಾರಿ. ಮಕ್ಕಳು ಸಮುದ್ರದ ಆಳವಾದ ಸ್ಥಳಕ್ಕೆ ಈಜಲು ತೆರಳಿದ್ದಾಗ ಶಿಕ್ಷಕರು ಕೂಡಲೇ ಅದನ್ನು ತಡೆಯಬೇಕಿತ್ತು. ಆದರೆ, ಅವರು ಹಾಗೆ ಮಾಡಿಲ್ಲ. ಹೀಗಾಗಿ ಪ್ರಾಥಮಿಕ ತನಿಖೆಯಲ್ಲಿ ಶಿಕ್ಷಕರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ” ಎಂದರು.
ಇದನ್ನೂ ಓದಿ : Bangla crisis/ ಭಟ್ಕಳದಲ್ಲಿ ಹಿಂದೂಗಳ ಬೃಹತ್ ಪ್ರತಿಭಟನೆ
“ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಜೀವಹಾನಿ ಆದಲ್ಲಿ, ನಾವು ಜವಾಬ್ದಾರರಲ್ಲ ಎಂದು ಕೈಚೆಲ್ಲಲು ನಮ್ಮ ಸರ್ಕಾರ ಸಿದ್ಧವಿಲ್ಲ. ಹೀಗಾಗಿ ನಿರ್ಲಕ್ಷ್ಯ ವಹಿಸಿದ್ದ ಶಿಕ್ಷಕರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಹೆಚ್ಚಿನ ಜನ ಪ್ರವಾಸಕ್ಕೆ ಆಗಮಿಸುವ ಸ್ಥಳಕ್ಕೆ ಮತ್ತಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂಬ ಸಮೃದ್ಧಿ ಮಂಜುನಾಥ್ ಅವರ ಸಲಹೆಯನ್ನೂ ಸ್ವೀಕರಿಸಲಾಗುವುದು. ಅಲ್ಲದೆ, ಈ ದುರಂತದ ಬಗ್ಗೆ ಶೀಘ್ರ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ಸದನಕ್ಕೆ ಭರವಸೆ ನೀಡಿದರು.
ಈ ಸುದ್ದಿಯ ವಿಡಿಯೋವನ್ನು ಯುಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : Road Trip/ ಬೆಂಗಳೂರು ಟು ಗೋವಾ : ಹೀಗೊಂದು ರಸ್ತೆ ಪ್ರವಾಸ