ಭಟ್ಕಳ : ಚಲಿಸುತ್ತಿದ್ದ ಶಾಲಾ ವಾಹನಕ್ಕೆ (School van) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹೋಗಿದ್ದು, ಅದೃಷ್ಟವಶಾತ್‌ ಟೆಂಪೋದಲ್ಲಿದ್ದ ಎಲ್ಲ 12 ವಿದ್ಯಾರ್ಥಿಗಳು ಪಾರಾಗಿದ್ದಾರೆ. ಭಟ್ಕಳ (Bhatkal) ತಾಲೂಕಿನ ವೆಂಕಟಾಪುರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಈ ಘಟನೆ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳ ಡೈರಿ ಫೇಸ್‌ಬುಕ್‌ ಪೇಜ್‌ ಫಾಲೋವ್‌ ಮಾಡಲು ಇಲ್ಲಿ ಕ್ಲಿಕ್‌ ಮಾಡಿ.

ಶಮ್ಸ್ ಶಾಲೆಯ ವಾಹನದಲ್ಲಿ (School van)  ವಿದ್ಯಾರ್ಥಿಗಳನ್ನು ಮನೆಗೆ ಬಿಡಲು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಮ್ಸ್ ಶಾಲೆಯಿಂದ ಶಿರಾಲಿ ಕಡೆಗೆ ವಿದ್ಯಾರ್ಥಿಗಳನ್ನು ಬಿಡಲು ತೆರಳುತ್ತಿದ್ದ ವೇಳೆ ಇಲ್ಲಿನ ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮೊದಲು ವಿದ್ಯಾರ್ಥಿಗಳನ್ನು ಕೆಳಗೆ ಇಳಿಸಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಅಷ್ಟರಲ್ಲಾಗಲೇ ವಾಹನಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿನಂದಿಸಿದ್ದಾರೆ. ವಾಹನ ಚಾಲಕ ನೀಡಿರುವ ಮಾಹಿತಿ ಪ್ರಕಾರ ೧೨ ವಿದ್ಯಾರ್ಥಿಗಳು ವಾಹನದಲ್ಲಿದ್ದರು ಎಂದು ತಿಳಿದು ಬಂದಿದೆ.

ಈ ಸುದ್ದಿಯ ವಿಡಿಯೋವನ್ನು ಯುಟ್ಯೂಬ್‌ ಚಾನೆಲ್‌, ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ :  ವಿದ್ಯಾಂಜಲಿ ಶಾಲೆಗೆ ಮತ್ತೊಂದು ರಾಷ್ಟ್ರ ಮಟ್ಟದ ಪ್ರಶಸ್ತಿ