ಭಟ್ಕಳ (Bhatkal): ವೈಕುಂಠ ಏಕಾದಶಿ (Vaikuntha Ekadashi) ಅಂಗವಾಗಿ ಇಲ್ಲಿನ ಆಸರಕೇರಿಯ ನಾಮಧಾರಿ ಗುರುಮಠದ ನಿಚ್ಛಲಮಕ್ಕಿ ವೆಂಕಟರಮಣ ದೇವಸ್ಥಾನಕ್ಕೆ ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆದು ಪುನೀತರಾದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳ ಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ಮುಂಜಾನೆ ೪ ಗಂಟೆಯಿಂದಲೇ ಪೂಜಾ ಕೈಂಕರ್ಯಗಳು ಪ್ರಾರಂಭಗೊಂಡು. ಬೆಳಿಗ್ಗೆ ೭ ಗಂಟೆಯಿಂದ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಭಕ್ತರು ದೇವಸ್ಥಾನದ ಉತ್ತರದ ದ್ವಾರದ ಮೂಲಕ ದೇವಸ್ಥಾನದ ಒಳಗೆ ಪ್ರವೇಶಿಸಿ ದೇವರ ದರ್ಶನ ಪಡೆದರು. ದೇವಸ್ಥಾನದಲ್ಲಿ ಉತ್ತರ ದ್ವಾರವನ್ನು ವಿಶೇಷವಾಗಿ ಹೂವಿನಿಂದ ಅಲಂಕರಿಸಲಾಗಿತ್ತು.
ಇದನ್ನೂ ಓದಿ : ೧೪ರಂದು ವನದುರ್ಗಾ ದೇವಿ ಹಬ್ಬ
ವೈಕುಂಠ ಏಕಾದಶಿ (Vaikuntha Ekadashi) ಅಂಗವಾಗಿ ದೇವರ ಉತ್ಸವ ಮೂರ್ತಿಯನ್ನು ವೈಕುಂಠ ದ್ವಾರದಲ್ಲಿ ಉಯ್ಯಾಲೆಯಲ್ಲಿ ಆಸೀನಗೊಳಿಸಿ ವಿಶೇಷವಾಗಿ ಅಲಂಕಾರಗೊಳಿಸಿ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಆಡಳಿತ ಸಮಿತಿ ವತಿಯಿಂದ ದೇವರ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಪಾನಕ ಹಾಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ಭಜನೆಯ ನಂತರ ರಾತ್ರಿ ೯ ಗಂಟೆಗೆ ಮಹಾಪೂಜೆ ಸಲ್ಲಿಸಿ ಪ್ರಸಾದ ವಿತರಿಸಲಾಯಿತು.
ಈ ಸುದ್ದಿಯ ವಿಡಿಯೋವನ್ನು ಯುಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : Belagavi/ ಉ.ಕ. ಜಿಲ್ಲೆಯಲ್ಲಿ ಹೆಣ್ಣು ಮಗು ಮಾರಾಟದ ಮತ್ತೊಂದು ಪ್ರಕರಣ