ಕಾರವಾರ (Karwar) : ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿರುವ ಅನಧಿಕೃತ ಹೋಂ ಸ್ಟೇ ಗಳ (Home Stay) ಕುರಿತಂತೆ ವಿವರವಾದ ಕ್ರೋಢೀಕೃತ ವರದಿಯನ್ನು ಒಂದು ವಾರದ ಒಳಗೆ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಯ (Tourism Department) ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಚಟುವಟಿಕೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಜಿಲ್ಲೆಯಾದ್ಯಂತ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ ಸ್ಟೇ ಗಳ (Home Stay) ಕುರಿತು ಸಂಬಂಧಪಟ್ಟ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ಗಳಿಂದ ನಿಖರವಾದ ಮಾಹಿತಿಯನ್ನು ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ, ಅನಧಿಕೃತವಾಗಿರುವ ಈ ಹೋ ಸ್ಟೇ ಗಳನ್ನು ಇಲಾಖೆ ವತಿಯಿಂದ ಅಗತ್ಯ ಅನುಮತಿಗಳನ್ನು ಪಡೆದು ಅಧಿಕೃತವಾಗಿ ನಡೆಸುವ ರೀತಿಯಲ್ಲಿ ನೋಡಿಕೊಳ್ಳುವಂತೆ ಸೂಚಿಸಿದರು.
ವಿಡಿಯೋ ಸಹಿತ ಇದನ್ನೂ ಓದಿ : ದೇವರ ದರ್ಶನಕ್ಕೆ ವೈಕುಂಠ ದ್ವಾರ
ಕಾರವಾರದ ಬೀಚ್ನಲ್ಲಿರುವ (Karwar beach) ಟುಪಲೋವ್ ಯುದ್ದ ವಿಮಾನವನ್ನು ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸುವ ಕುರಿತಂತೆ, ಬಾಕಿ ಇರುವ ಅಗತ್ಯ ಕಾಮಗಾರಿ ಮತ್ತು ಅನುಮತಿಗಳನ್ನು ಪಡೆಯಬೇಕು. ಸುರಕ್ಷತಾ ಕ್ರಮಗಳನ್ನು ದೃಢೀಕರಿಸಿಕೊಂಡು ಈ ತಿಂಗಳ ಅಂತ್ಯದೊಳಗೆ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಇದನ್ನೂ ಓದಿ : ೧೪ರಂದು ವನದುರ್ಗಾ ದೇವಿ ಹಬ್ಬ
ಜಿಲ್ಲೆಯ ಎಲ್ಲಾ ಕಡಲತೀರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಕಾಮಗಾರಿ ಮತ್ತು ಸಾಧನ ಖರೀದಿಗೆ ಟೆಂಡರ್ ಕರೆದು ಈ ಕುರಿತು ಪ್ರಥಮಾಧ್ಯತೆಯಲ್ಲಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳ (Tourism Places) ಕುರಿತಂತೆ ಕುರಿತ ಉತ್ತಮ ಗುಣಮಟ್ಟದ ಛಾಯಾಚಿತ್ರಗಳನ್ನು ಒಳಗೊಂಡ ಕಾಫೀ ಟೇಬಲ್ ಬುಕ್ ಮುದ್ರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಭೆಯಲ್ಲಿ ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಉಪ ವಿಭಾಗಾಧಿಕಾರಿ ಕನಿಷ್ಕ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ ಹಾಗೂ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ : ಉ.ಕ. ಜಿಲ್ಲೆಯಲ್ಲಿ ಹೆಣ್ಣು ಮಗು ಮಾರಾಟದ ಮತ್ತೊಂದು ಪ್ರಕರಣ