ಭಟ್ಕಳ (Bhatkal) : ಉತ್ತರ ಕನ್ನಡ (Uttara Kannada) ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಜ.೧೪ ಮತ್ತು  ೧೫ ರಂದು ಭಟ್ಕಳ ತಾಲೂಕು ಪ್ರವಾಸ ಕೈಗೊಂಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಜ.೧೪ ರಂದು ಮಧ್ಯಾಹ್ನ ೩.೩೦ಕ್ಕೆ ನ್ಯಾಷನಲ್ ಹೈವೇ ಅಂಡರ್ ಪಾಸ್ ವಿಚಾರವಾಗಿ ಕಾಯ್ಕಿಣಿ ಬಸ್ತಿ ಮತ್ತು ಮೂಡಭಟ್ಕಳ ಬೈಪಾಸ್ ಭಾಗದ ಸಾರ್ವಜನಿಕರ ಜೊತೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಸಂಜೆ ೬ ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ ೬.೩೦ಕ್ಕೆ ಸರಿಯಾಗಿ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಮುರುಡೇಶ್ವರಕ್ಕೆ ಬಂದಿದ್ದ ಹಿರಿಯ ಪತ್ರಕರ್ತ ನಿಧನ

ನಾಳೆ ಜ.೧೫ ರಂದು ಬೆಳಿಗ್ಗೆ ೧೦ ಗಂಟೆಗೆ ಸರಿಯಾಗಿ ಶೇಡಬರಿ ಜಾತ್ರೆ ಹಾಗೂ ಕಿತ್ರೆ ದೇವಸ್ಥಾನಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಭಟ್ಕಳ ಮಂಡಳ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Mahaganapati/ ಜ. ೧೯ರಂದು ವರ್ಧಂತ್ಯುತ್ಸವ